ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರು ಮುಡಾದಿಂದ 14 ಬದಲಿ ನಿವೇಶನಗಳನ್ನು ಪಡೆಯುವ ಮುನ್ನವೇ ಅನೇಕ ನಿವೇಶನಗಳನ್ನು ಪಡೆದಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದ್ದು, ದಾಖಲೆ ಸಹಿತ ಮಾಹಿತಿಗಳನ್ನು ಬಿಡುಗಡೆ ಮಾಡಿದ್ದಾರೆ.
ಈ ಬಗ್ಗೆ ದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ಪ್ರಾಸಿಕ್ಯೂಷನ್‌ಗೆ ಹಾಗೂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುತ್ತಿದೆ. ಸಿದ್ದರಾಮಯ್ಯ ಅವರು ಮುಡಾದ 14 ಬದಲಿ ನಿವೇಶನಗಳನ್ನು ತನ್ನ ಸ್ವಾಧೀನಕ್ಕೆ ತೆಗೆದುಕೊಂಡಿತ್ತು ಎಂದಿದ್ದರು. ಬಳಿಕ ಹಗರಣ ಬೆಳಕಿಗೆ ಬರುತ್ತಿದ್ದಂತೆ 62 ಕೋಟಿ ರೂ. ನೀಡಿದರೆ ಮಾತ್ರ ನಿವೇಶನಗಳನ್ನು ವಾಪಸ್ಸು ನೀಡುತ್ತವೆ ಎಂದಿದ್ದರು ಎಂದು ಸಿಎಂ ಸಿದ್ದು ವಿರುದ್ಧ ವಾಗ್ದಾಳಿ ನಡೆಸಿದರು.