ರಾಜ್ಯ

14 ಬದಲಿ ನಿವೇಶನ ಪಡೆಯೋ ಮುನ್ನವೇ ಸಿದ್ದರಾಮಯ್ಯ ಅನೇಕ ನಿವೇಶನ ಪಡೆದಿದ್ದಾರೆ: ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ

ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರು ಮುಡಾದಿಂದ 14 ಬದಲಿ ನಿವೇಶನಗಳನ್ನು ಪಡೆಯುವ ಮುನ್ನವೇ ಅನೇಕ ನಿವೇಶನಗಳನ್ನು ಪಡೆದಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದ್ದು, ದಾಖಲೆ ಸಹಿತ ಮಾಹಿತಿಗಳನ್ನು ಬಿಡುಗಡೆ ಮಾಡಿದ್ದಾರೆ.

ಈ ಬಗ್ಗೆ ದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್‌ ಪ್ರಾಸಿಕ್ಯೂಷನ್‌ಗೆ ಹಾಗೂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುತ್ತಿದೆ. ಸಿದ್ದರಾಮಯ್ಯ ಅವರು ಮುಡಾದ 14 ಬದಲಿ ನಿವೇಶನಗಳನ್ನು ತನ್ನ ಸ್ವಾಧೀನಕ್ಕೆ ತೆಗೆದುಕೊಂಡಿತ್ತು ಎಂದಿದ್ದರು. ಬಳಿಕ ಹಗರಣ ಬೆಳಕಿಗೆ ಬರುತ್ತಿದ್ದಂತೆ 62 ಕೋಟಿ ರೂ. ನೀಡಿದರೆ ಮಾತ್ರ ನಿವೇಶನಗಳನ್ನು ವಾಪಸ್ಸು ನೀಡುತ್ತವೆ ಎಂದಿದ್ದರು ಎಂದು ಸಿಎಂ ಸಿದ್ದು ವಿರುದ್ಧ ವಾಗ್ದಾಳಿ ನಡೆಸಿದರು.

 

ಆಂದೋಲನ ಡೆಸ್ಕ್

Recent Posts

ದ್ವೇಷ ಭಾಷಣ ಮಾಡುವುದರಲ್ಲಿ ಬಿಜೆಪಿಯವರು ಪಿತಾಮಹರು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…

6 mins ago

ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿ ಬಂಧನ

ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ…

38 mins ago

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು 60 ಇಂಡಿಗೋ ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…

1 hour ago

ಓದುಗರ ಪತ್ರ:  ನಂಜನಗೂಡಿನ ಪ್ರಮುಖ ವೃತ್ತಕ್ಕೆ ಬಿ.ವಿ.ಪಂಡಿತರ ಹೆಸರಿಡಿ

ನಂಜನಗೂಡಿನ ಸದ್ವೈದ್ಯ ಶಾಲಾ ಸಂಸ್ಥಾಪಕರಾಗಿದ್ದ ಬಿ.ವಿ.ಪಂಡಿತರು ಆಯುರ್ವೇದ ಉತ್ಪನ್ನಗಳನ್ನು ರೂಪಿಸಿದ ಹಿರಿಮೆ ಹೊಂದಿದ್ದಾರೆ. ದಂತಧಾವನ ಚೂರ್ಣ (ನಂಜನಗೂಡು ಹಲ್ಲು ಪುಡಿ)…

1 hour ago

ಓದುಗರ ಪತ್ರ:  ಭೈರಪ್ಪ ಸ್ಮಾರಕ, ತಿಮ್ಮಕ್ಕ ವಸ್ತು ಸಂಗ್ರಹಾಲಯ ಸ್ವಾಗತಾರ್ಹ

ಮೈಸೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಾಣ ಹಾಗೂ ಬೇಲೂರಿನಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ…

1 hour ago

ಓದುಗರ ಪತ್ರ:  ಗೋಪಾಲಸ್ವಾಮಿ ಬೆಟ್ಟದ ಬಸ್ ಪ್ರಯಾಣ ದರ ಇಳಿಕೆ ಮಾಡಿ

ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ. ರಾಜ್ಯ ರಸ್ತೆ ಸಾರಿಗೆ ನಿಗಮದ…

1 hour ago