Mysore
27
broken clouds

Social Media

ಗುರುವಾರ, 08 ಜನವರಿ 2026
Light
Dark

ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ದೇವರಾಜ ಅರಸು ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತಕ್ಕೂ ಹೋಲಿಕೆ ಮಾಡುವುದು ಬೇಡ. ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ ಎಂದು ಮಾಜಿ ಸಿಎಂ ಯಡಿಯೂರಪ್ಪ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೇವರಾಜ ಅರಸು ಆಡಳಿತ ವೈಖರಿ ಬೇರೆ, ಸಿದ್ದರಾಮಯ್ಯ ಆಡಳಿತ ವೈಖರಿ ಬೇರೆ. ಈ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಈ ಸಮಯದಲ್ಲಿ ದೊಡ್ಡ ಸಾಧನೆ ಮಾಡಿದ್ದೇನೆ ಎಂದು ತೋರಿಸಿದ್ದನ್ನು ಜನರು ಮೆಚ್ಚುವುದಿಲ್ಲ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಈಗಾಗಲೇ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸುತ್ತಿದೆ. ಮುಂದಿನ ಚುನಾವಣೆಯಲ್ಲೂ ಬಜೆಪಿ ದೊಡ್ಡ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಲಿದೆ. ಮುಂದಿನ ದಿನಗಳಲ್ಲಿ ಸ್ಥಳೀಯ ಸಂಸ್ಥೆ ಹಾಗೂ ಎಲ್ಲಾ ಚುನಾವಣೆಗಳಲ್ಲೂ ಗೆಲುವು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

 

Tags:
error: Content is protected !!