Mysore
22
light rain

Social Media

ಮಂಗಳವಾರ, 04 ಆಗಸ್ಟ್ 2026
Light
Dark

ಜನರ ಜೀವ ರಕ್ಷಿಸಲು ಸಿದ್ದರಾಮಯ್ಯ ಸಂಪೂರ್ಣ ವಿಫಲ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮಕ್ಕೂ, ಕಾಲ್ತುಳಿತಕ್ಕೂ ನಮಗೂ ಸಂಬಂಧವಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಕಿಡಿಕಾರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸಿಎಂ ಸಿದ್ದರಾಮಯ್ಯ ಅವರು ಅಧಿಕಾರದ ಸಿಂಹಾಸನವನ್ನು ಆರಿಸಿಕೊಂಡರೇ ಹೊರತು ಜನಸಾಮಾನ್ಯರನ್ನಲ್ಲ.

11 ಮಂದಿ ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದಾಗ, ಸಚಿವರ ಕುಟುಂಬಗಳು ಸೆಲ್ಫಿ ತೆಗೆದುಕೊಳ್ಳುವುದರಲ್ಲಿ ನಿರತರಾಗಿದ್ದರು. ಆದರೂ ಕೂಡ ಸಿಎಂ, ಅದು ನಮ್ಮ ಕಾರ್ಯಕ್ರಮವಾಗಿರಲಿಲ್ಲ ಎಂದು ಹೇಳಿದ್ದರು. ಆದರೆ ಕ್ರೀಡಾಂಗಣವು ವಿಧಾನಸೌಧದಿಂದ ಕೂಗಳತೆಯ ದೂರದಲ್ಲಿದೆ. ಅದು ಪಾಕಿಸ್ತಾನವಲ್ಲ. ಅದು ನಿಮ್ಮ ರಾಜ್ಯ, ನಿಮ್ಮ ನಗರ. ಅವರೆಲ್ಲಾ ನಿಮ್ಮ ಜನರು. ನೀವು ರಾಜ್ಯವನ್ನು ಮುನ್ನಡೆಸಲು ಆಯ್ಕೆಯಾದವರು. ಕಾರ್ಯಕ್ರಮದಲ್ಲಿ ಅತಿಥಿಯಂತೆ ವರ್ತಿಸುವುದನ್ನು ಮೊದಲು ನಿಲ್ಲಿಸಿ ಎಂದು ಕಿಡಿಕಾರಿದ್ದಾರೆ.

Tags:
error: Content is protected !!