ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮಕ್ಕೂ, ಕಾಲ್ತುಳಿತಕ್ಕೂ ನಮಗೂ ಸಂಬಂಧವಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಕಿಡಿಕಾರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಸಿಎಂ ಸಿದ್ದರಾಮಯ್ಯ ಅವರು ಅಧಿಕಾರದ ಸಿಂಹಾಸನವನ್ನು ಆರಿಸಿಕೊಂಡರೇ ಹೊರತು ಜನಸಾಮಾನ್ಯರನ್ನಲ್ಲ.
11 ಮಂದಿ ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದಾಗ, ಸಚಿವರ ಕುಟುಂಬಗಳು ಸೆಲ್ಫಿ ತೆಗೆದುಕೊಳ್ಳುವುದರಲ್ಲಿ ನಿರತರಾಗಿದ್ದರು. ಆದರೂ ಕೂಡ ಸಿಎಂ, ಅದು ನಮ್ಮ ಕಾರ್ಯಕ್ರಮವಾಗಿರಲಿಲ್ಲ ಎಂದು ಹೇಳಿದ್ದರು. ಆದರೆ ಕ್ರೀಡಾಂಗಣವು ವಿಧಾನಸೌಧದಿಂದ ಕೂಗಳತೆಯ ದೂರದಲ್ಲಿದೆ. ಅದು ಪಾಕಿಸ್ತಾನವಲ್ಲ. ಅದು ನಿಮ್ಮ ರಾಜ್ಯ, ನಿಮ್ಮ ನಗರ. ಅವರೆಲ್ಲಾ ನಿಮ್ಮ ಜನರು. ನೀವು ರಾಜ್ಯವನ್ನು ಮುನ್ನಡೆಸಲು ಆಯ್ಕೆಯಾದವರು. ಕಾರ್ಯಕ್ರಮದಲ್ಲಿ ಅತಿಥಿಯಂತೆ ವರ್ತಿಸುವುದನ್ನು ಮೊದಲು ನಿಲ್ಲಿಸಿ ಎಂದು ಕಿಡಿಕಾರಿದ್ದಾರೆ.
ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…
ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…
ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…
ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…