ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ನೀತಿ ಆಯೋಗದ ಸಭೆಗೆ ಗೈರಾಗುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರ ಮಟ್ಟದಲ್ಲಿ ಕರ್ನಾಟಕಕ್ಕೆ ಅಪಮಾನ ಮಾಡಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ನೀತಿ ಆಯೋಗದ ಸಭೆಗೆ 11 ರಾಜ್ಯಗಳ ಮುಖ್ಯಮಂತ್ರಿಗಳು ಗೈರು ಹಾಜರಾಗಿದ್ದರು.
ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ ರಾಜ್ಯಗಳ ಅಭಿವೃದ್ಧಿಯಿಂದ ದೇಶ ಸುಭಿಕ್ಷ – ದೇಶದ ಪ್ರಗತಿಯಿಂದ ರಾಜ್ಯಗಳ ಸಮೃದ್ಧಿ. ಸಮನ್ವಯ – ಸಹಕಾರಗಳ ಒತ್ತಾಸೆಯೊಂದಿಗೆ 2047ರ ವೇಳೆಗೆ ಭಾರತವನ್ನು ಸರ್ವಾಂಗೀಣವಾಗಿ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ, ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಅಪೇಕ್ಷಿತರಿರುವ, ನೀತಿ ಆಯೋಗದ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರಾಗಿ, ರಾಷ್ಟ್ರಮಟ್ಟದಲ್ಲಿ ರಾಜ್ಯಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದೆ.
ಅಭಿವೃಧ್ಧಿ ಅಸಾಧ್ಯ : ಪ್ರತಿಯೊಂದರಲ್ಲಿಯೂ ರಾಜಕೀಯ ದ್ವೇಷ ಹಾಗು ಸೇಡನ್ನು ತೀರಿಸಿಕೊಳ್ಳುವ ಮಾನಸೀಕತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಸರಕಾರದಿಂದ ರಾಜ್ಯದ ಅಭಿವೃಧ್ಧಿ ಅಸಾಧ್ಯ ಎಂದು ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ.
https://twitter.com/BJP4Karnataka/status/1663034054747508736?s=20