ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳ ಸಿದ್ಧತೆ ಆರಂಭವಾಗಿರುವಂತೆಯೇ ಇತ್ತ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಹಕ್ಕು ಸಿದ್ದರಾಮಯ್ಯ ಗೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಭಾನುವಾರ ಕೊಪ್ಪಳದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುವಾರ್, ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನ ಘೋಷಣೆ ವಾಡುವ ಹಕ್ಕು ಸಿದ್ದರಾಮಯ್ಯ ಅವರಿಗೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಹಕ್ಕು ಸಿದ್ದರಾಮಯ್ಯ ಅವರಿಗೂ ಇಲ್ಲ, ನನಗೂ ಇಲ್ಲ. ಆ ಅಧಿಕಾರ ಏನಿದ್ದರೂ ಎಐಸಿಸಿಗೆ ಇದೆ. ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಅಭ್ಯರ್ಥಿಗಳನ್ನು ಘೋಷಣೆ ಮಾಡಲಿದ್ದಾರೆ. ಯಾವ ವಿಚಾರದಲ್ಲಿ ಸಿದ್ದರಾಮಯ್ಯ ಅವರು ಹಾಗೆ ಹೇಳಿದ್ದಾರೋ ಗೊತ್ತಿಲ್ಲ. ಅಲ್ಲಿರುವವರಿಗೆ ಉತ್ತೇಜನ ನೀಡಲು ಹೇಳಿರಬಹುದು. ಆದರೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ, ಹೈಕವಾಂಡ್ಗೆ ಮಾತ್ರ ಅಭ್ಯರ್ಥಿಗಳನ್ನು ತೀರ್ಮಾನಿಸುವ ಅಧಿಕಾರ ಇದೆ ಎಂದು ಹೇಳಿದರು.