ರಾಜ್ಯ

ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು (ಆಗಸ್ಟ್ 19೦ ಬೆಂಗಳೂರಿನ ಚಿತ್ರಕಲಾ ಪರಿಷತ್ ನಲ್ಲಿ ಫೋಟೋ ಜರ್ನಲಿಸ್ಟ್ ರವರ ವತಿಯಿಂದ ಆಯೋಜಿಸಲಾಗಿದ್ದ ಫೋಟೋ ಎಕ್ಸಿಬಿಷನ್ ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ರಿಟ್ ಅರ್ಜಿಯಲ್ಲಿ ಮಧ್ಯಂತರ ಪರಿಹಾರವಾಗಿ ಪ್ರಾಸಿಕ್ಯೂಷನ್ ಗೆ ತಡೆಯಾಜ್ಞೆ ನೀಡಬೇಕೆಂದು ಕೋರಲಾಗಿದೆ. ಈ ರಿಟ್ ಅರ್ಜಿಯ ಬಗ್ಗೆ ಖ್ಯಾತ ವಕೀಲರಾದ ಅಭಿಷೇಕ್ ಮನು ಸಿಂಗ್ವಿಯವರು ವಾದ ಮಂಡಿಸಲಿದ್ದಾರೆ. ನನ್ನ ಆತ್ಮಸಾಕ್ಷಿ ಸ್ಪಷ್ಟವಾಗಿದ್ದು, ನಾನು ಯಾವ ತಪ್ಪನ್ನೂ ಎಸಗಿಲ್ಲ. ನಾನು ಮಂತ್ರಿಯಾಗಿ 40 ವರ್ಷಗಳು ಕಳೆದಿದ್ದು, ಈ ಅವಧಿಯಲ್ಲಿ ನನ್ನ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲ. ಜನರ ಆಶೀರ್ವಾದದಿಂದ ಅವರ ಸೇವೆಯಲ್ಲಿ ನಿರತನಾಗಿದ್ದೇನೆ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕವಿದ್ದಂತೆ. ನಾನು ಯಾವುದೇ ತಪ್ಪು ಮಾಡಿಲ್ಲವೆಂದು ರಾಜ್ಯದ ಜನರಿಗೂ ತಿಳಿದಿದೆ ಎಂದರು.

ಪಿತೂರಿಯ ವಿರುದ್ಧ ಕಾನೂನು ಹಾಗೂ ರಾಜಕೀಯ ಹೋರಾಟ: ಬಿಜೆಪಿಯವರು ಸಿಎಂ ರಾಜಿನಾಮೆ ಬೇಡಿಕೆಯಿರಿಸಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ರಾಜಭವನವನ್ನು ಬಳಸಿಕೊಂಡು ಬಿಜೆಪಿ, ಜೆಡಿಎಸ್ ಹಾಗೂ ಕೇಂದ್ರ ಸರ್ಕಾರದವರು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ದುರುದ್ದೇಶದಿಂದ ನನ್ನ ಮೇಲೆ ಮಸಿ ಬಳಿಯಲು ಇಂತಹ ಕೃತ್ಯಕ್ಕೆ ಕೈಹಾಕಿದ್ದಾರೆ. ಬಿಜೆಪಿಯವರು ದುರುದ್ದೇಶದಿಂದ ಪ್ರತಿಭಟನೆ ಮಾಡುತ್ತಿದ್ದು, ರಾಜಕೀಯವಾಗಿ ಇದನ್ನು ಎದಿರುಸುತ್ತೇವೆ. ಈ ಪಿತೂರಿಯ ವಿರುದ್ಧ ಕಾನೂನು ಹಾಗೂ ರಾಜಕೀಯ ಹೋರಾಟವನ್ನು ಕೈಗೊಳ್ಳುತ್ತೇವೆ. ಇಂತಹ ರಾಜಕೀಯ ಹೋರಾಟಗಳನ್ನು ನಿರಂತರವಾಗಿ ಮಾಡಿಕೊಂಡುಬಂದಿದ್ದು, ಇನ್ನೂ ಹೆಚ್ಚಿನ ಸ್ಪೂರ್ತಿಯೊಂದಿಗೆ ಹೋರಾಡುತ್ತೇನೆ ಎಂದರು.

ನನ್ನನ್ನು ರಾಜಕೀಯವಾಗಿ ಮುಗಿಸಬಹುದು ಎಂಬುದು ಭ್ರಮೆ: ಪ್ರತಿಪಕ್ಷಗಳಿಗೆ ಸಿಎಂ ಅವರಿಂದ ಭಯ ಕಾಡುತ್ತಿದ್ದು, ಅವರನ್ನೇ ಗುರಿಮಾಡಿಕೊಂಡು ಆಪಾದನೆ ಮಾಡುತ್ತಿರುವ ಬಗೆಗಿನ ಪ್ರಶ್ನೆಗೆ ಉತ್ತರಿಸುತ್ತಾ, ನಾನು ಬಡಜನರ ಪರವಾಗಿರುವುದೇ ಪ್ರತಿಪಕ್ಷಗಳ ಭಯಕ್ಕೆ ಕಾರಣವಾಗಿದೆ. ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿರುವುದು ಅವರನ್ನು ಕಾಡುತ್ತಿದೆ. ಸಿದ್ದರಾಮಯ್ಯನನ್ನು ರಾಜಕೀಯವಾಗಿ ಮುಗಿಸಿದರೆ, ಕಾಂಗ್ರೆಸ್ ಪಕ್ಷವನ್ನು ಮುಗಿಸಬಹುದು ಎಂಬ ಭ್ರಮೆಯಲ್ಲಿ ಪ್ರತಿಪಕ್ಷಗಳಿವೆ ಎಂದು ತಿರುಗೇಟು ನೀಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ರೋಹಿತ್‌ ಬ್ಯಾಟಿಂಗ್‌ ಅಬ್ಬರ : ಭರ್ಜರಿ ಗೆಲುವು ದಾಖಲಿಸಿದ ಮುಂಬೈ

ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ ಹಾಕಿದ ಮುಂಬೈ ಇಂಡಿಯನ್ಸ್‌ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…

37 mins ago

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

4 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

4 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

4 hours ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

4 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

4 hours ago