ರಾಜ್ಯ

ಡಿಸಿಎಂ ಹುದ್ದೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ​ನಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಗುದ್ದಾಟ ಜೋರಾಗಿ ನಡೆಯುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯ ಅಖಾಡಕ್ಕಿಳಿದಿದ್ದಾರೆ. ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ  ಯಾವುದೇ ಕಾರಣಕ್ಕೂ ಯಾರೂ ಕೂಡ ಬಹಿರಂಗವಾಗಿ ಹೇಳಿಕೆ ನೀಡಬಾರದು ಎಂದು ಕಾಂಗ್ರೆಸ್‌ ನ ನಾಯಕರು ಹಾಗೂ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಎಚ್ಚರಿಕೆ ಕೊಟ್ಟಿದ್ದಾರೆ.

ಡಿಸಿಎಂ ಹುದ್ದೆ ವಿಚಾರಕ್ಕೆ ಸಂಬಂಧಪಟ್ಟಂತೆವ ಹೇಳಿಕೆ ನೀಡಲು ಆರಂಭಿಸಿದ್ದ ಸಚಿವ ಕೆ.ಎನ್‌ ರಾಜಣ್ಣಗೆ ಸಿದ್ದರಾಮಯ್ಯ ದೂರವಾಣಿ ಕರೆ ಮೂಲಕ ಮಾತುಕತೆ ನಡೆಸಿ, ಬಹಿರಂಗ ಹೇಳಿಕೆಗಳಿಂದ ಸರ್ಕಾರ, ಪಕ್ಷದ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ಡಿಸಿಎಂ ಹುದ್ದೆ ಬಗ್ಗೆ ಬಹಿರಂಗ ಹೇಳಿಕೆ ನೀಡಲೇಬಾರದು ಎಂದು ಖಡಕ್‌ ಸೂಚನೆ ನೀಡಿದರು..

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

32 mins ago

ಗ್ಯಾರಂಟಿ ಬಿಟ್ಟರೆ ಬೇರೆ ಬಂಡವಾಳ ಇವರಿಗಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿ

ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…

43 mins ago

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು…

48 mins ago

ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಮಳೆಯ ಆರ್ಭಟ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

1 hour ago

ಮೈಸೂರು: ಹಸಿರು ಕ್ರಾಂತಿ ಹರಿಕಾರ ಬಾಬುಜಗಜೀವನ್ ರಾಮ್ 119ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನ್‌ ರಾಮ್‌ ಅವರ 119ನೇ ಜಯಂತಿಯನ್ನು ಆಚರಣೆ…

1 hour ago

ಬೆಂಗಳೂರಿನಲ್ಲಿಂದು ಆರ್‌ಸಿಬಿ vs ಸಿಎಸ್‌ಕೆ ಹೈವೋಲ್ಟೇಜ್‌ ಕದನ

ಬೆಂಗಳೂರು: ಅತಿ ಹೆಚ್ಚು ಅಭಿಮಾನಿ ಬಳಗ ಹೊಂದಿರುವ ಐಪಿಎಲ್‌ನ 2 ತಂಡಗಳಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಚೆನ್ನೈ ಸೂಪರ್‌…

2 hours ago