ರಾಜ್ಯ

ಶಿಕ್ಷಣ ಸಂಸ್ಥೆಗಳ ಸಮೀಪ ಗಾಂಜಾ ಮಾರಾಟ ಕಡಿವಾಣಕ್ಕೆ ಸಿಎಂ ಸೂಚನೆ

ಬೆಂಗಳೂರು: ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಗಾಂಜಾ ಹಾಗೂ ಇನ್ನಿತರ ಮಾದಕ ಸೇವನೆಗಳ ಹಾವಳಿಗೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಕುರಿತು ಶಾಸಕ ದಿನೇಶ್‌ ಗೂಳಿಗೌಡ ಬರೆದಿದ್ದ ಪತ್ರಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ.

ಮಾದಕ ವ್ಯಸನಕ್ಕೆ ಒಳಗಾಗಿ ಹೆಚ್ಚಿನ ಸಂಖ್ಯೆಯ ಮಕ್ಕಳು ಬಲಿಯಾಗುತ್ತಿದ್ದಾರೆ, ತಕ್ಷಣ ಎಚ್ಚೆತ್ತುಕೊಳ್ಳದಿದ್ದರೆ ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ದಿನೇಶ್‌ ಗೂಳಿಗೌಡ ಎಚ್ಚರಿಸಿ ಗಮನ ಸೆಳೆದಿದ್ದರು. ಜಿಲ್ಲಾ ಮಟ್ಟದಲ್ಲಿ ಗಾಂಜಾ ಹಾಗೂ ಮಾದಕ ವಸ್ತು ಸೇವನೆಗಳ ಹಾವಳಿ ನಿಯಂತ್ರಣಕ್ಕೆ ವಿಶೇಷ ದಳ ರಚನೆ ಮಾಡಬೇಕು ಹಾಗೂ ಇನ್ನಿತರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಶಿಕ್ಷಣ ಸಂಸ್ಥೆಗಳ ಸಮೀಪ ಸೇರಿದಂತೆ ರಾಜ್ಯದಲ್ಲಿ ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣಗಳು ಹೆಚ್ಚಾಗುತ್ತಿರುವುದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸ್‌ ಮಹಾನಿರ್ದೇಶಕರು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

andolana

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

3 hours ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

3 hours ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

4 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

5 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

5 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

5 hours ago