ರಾಜ್ಯ

ಸರ್ಕಾರಿ ನೌಕರರ ಹಿತಾಸಕ್ತಿ ಕಾಯಲು ನಾನು ಸದಾ ಸಿದ್ದ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾನು ಮುಖ್ಯಮಂತ್ರಿಯಾಗಿ ಎರಡು ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ರಾಜ್ಯ ಸರ್ಕಾರಿ ನೌಕರರ ಸಂಘ ನಗರದಲ್ಲಿಂದು (ಆ.17) ಆಯೋಜಿಸಿದ್ದ ಮುಖ್ಯಮಂತ್ರಿಗಳಿಗೆ “ನಮ್ಮ‌ಅಭಿನಂದನೆ” ಕಾರ್ಯಕ್ರಮದಲ್ಲಿ ಬೃಹತ್ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಇದು ನಿಮ್ಮೆಲ್ಲರ ಸರ್ಕಾರ.‌ ಸರ್ಕಾರಿ ನೌಕರರ ಹಿತ ಕಾಯಲು ನಾನು ಮತ್ತು ನಮ್ಮ ಸಚಿವ ಸಂಪುಟ ಸದಾ ಸಿದ್ಧವಿದೆ ಎಂದರು.

ಸರ್ಕಾರ ಅಂದ್ರೆ ಎಲ್ಲಾ ಸರ್ಕಾರಿ ನೌಕರರೂ ಸೇರಿರ್ತಾರೆ. ನೀವೆಲ್ಲಾ ಒಟ್ಟು ಸೇರಿದರೆನೇ ಸರ್ಕಾರ ಎಂದು ಮುಖ್ಯಮಂತ್ರಿಗಳು ಘೋಷಿಸಿದರು.

ಅಂಬೇಡ್ಕರ್, ಗಾಂಧಿ, ಬಸವಾದಿ ಶರಣರು ಸಮ‌ ಸಮಾಜದ ಕನಸು ಕಂಡಿದ್ದರು‌. ಇವರೆಲ್ಲರ ಕನಸನ್ನು ನನಸು ಮಾಡುವ ಜವಾಬ್ದಾರಿ ನಿಮ್ಮೆಲ್ಲರ ಮೇಲೂ ಇದೆ. ಇದಕ್ಕಾಗಿ ಶ್ರಮಿಸೋಣ ಎಂದು ಕರೆ ನೀಡಿದರು.

ಸಮ ಸಮಾಜದ ಆಶಯದಿಂದ ಸರ್ಕಾರ ಜಾರಿ ಮಾಡುವ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ನಿಮ್ಮಗಳ ಮೇಲಿದೆ. ಶೋಷಿತ ಸಮುದಾಯಗಳ ಮನೆ ಬಾಗಿಲಿಗೆ ಸರ್ಕಾರದ ಕಾರ್ಯಕ್ರಮಗಳನ್ನು ತಲುಪಿಸಿದಾಗ ಮಾತ್ರ ನಮ್ಮ ನಿಮ್ಮ ಶ್ರಮ ಸಾರ್ಥಕವಾಗುತ್ತದೆ. ಹೀಗೆ ನಾವು ನೀವು ಸೇರಿ ಸ್ವಾಸ್ಥ್ಯ ಸಮಾಜ ರೂಪಿಸಬೇಕಿದೆ ಎಂದರು.

ನಿಮ್ಮೆಲ್ಲರ ಬೇಡಿಕೆಯಂತೆ OPS ಮತ್ತು ಆರೋಗ್ಯ ಸಂಜೀವಿನಿ ಕಾರ್ಯಕ್ರಮದ ಬಗ್ಗೆಯೂ ಸರ್ಕಾರ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುತ್ತದೆ. ಇದು ನಿಮ್ಮೆಲ್ಲರ ಸರ್ಕಾರ. ನಾನು ನಿಮ್ಮ ಜೊತೆ ಇರ್ತೇನೆ. ನಾವು-ನೀವು ಒಟ್ಟಾಗಿ ಜನರ ಜೊತೆ ಇದ್ದು, ಜನರ ಋಣ ತೀರಿಸೋಣ ಎಂದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ಶಾಸಕರಾದ ಪ್ರಕಾಶ್ ರಾಥೋಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿ ರಾಜ್ಯ ಸರ್ಕಾರಿ ನೌಕರರ ಸಂಘದ ನಾನಾ ವಿಭಾಗಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಹದೇಶ್ವರ ಬೆಟ್ಟದಲ್ಲಿ ಶೀಘ್ರದಲ್ಲಿ ಕಾಮಗಾರಿ ಪೂರ್ಣ: ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ: ಸಚಿವ ಕೆ ವೆಂಕಟೇಶ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ…

10 mins ago

ಬೆಂಗಳೂರು ಏರ್‌ಪೋರ್ಟ್‌ ಹಾಗೂ ರಾಮನಗರದಲ್ಲಿ 3 ಕೋಟಿಗೂ ಅಧಿಕ ಡ್ರಗ್ಸ್‌ ಜಪ್ತಿ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ರಾಮನಗರದಲ್ಲಿ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಕೋಟ್ಯಾಂತರ ಮೌಲ್ಯದ ಡ್ರಗ್ಸ್‌ ಅನ್ನು ಅಧಿಕಾರಿಗಳು…

20 mins ago

ಐದು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಐದು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ…

23 mins ago

ಬೆಟ್ಟಳ್ಳಿ ಮಾರಮ್ಮ ಜಾತ್ರೆಯನ್ನು ಯಶಸ್ವಿಗೊಳಿಸಿ: ತಹಶೀಲ್ದಾರ್‌ ಚೈತ್ರಾ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವವನ್ನು…

55 mins ago

ಓದುಗರ ಪತ್ರ: ವಿದ್ಯುತ್ ದರ ಏರಿಕೆ ಜನಸಾಮಾನ್ಯರಿಗೆ ಶಾಕ್

ರಾಜ್ಯದ ಐದು ಎಸ್ಕಾಂಗಳು ಸುಮಾರು ರೂ.೪,೫೦೦ ಕೋಟಿ ನಷ್ಟದ ನೆಪವೊಡ್ಡಿ ಪ್ರತಿ ಯೂನಿಟ್‌ಗೆ ೯೯ ಪೈಸೆಯವರೆಗೆ ದರ ಏರಿಕೆಗೆ ಪ್ರಸ್ತಾವನೆ…

2 hours ago

ಓದುಗರ ಪತ್ರ: ಬೃಂದಾವನ: ಟಿಕೆಟ್ ಹಣ ವಾಪಸ್ ನೀಡಿ

ವಿಶ್ವವಿಖ್ಯಾತ ಕೆ ಆರ್‌ಎಸ್‌ನ ಬೃಂದಾವನ ಗಾರ್ಡನ್‌ನಲ್ಲಿ ಫೆ.೨೨ರ ಸಂಜೆ ಸಂಗೀತ ನೃತ್ಯ ಕಾರಂಜಿ ತಾಂತ್ರಿಕ ಕಾರಣದಿಂದ ಚಾಲನೆಗೊಳ್ಳದ ಕಾರಣ ಅಲ್ಲಿ…

2 hours ago