ಬೆಂಗಳೂರು: ಸಿಎಂ ಸಿದ್ದರಾಮಯ್ಯ-ಕೇಂದ್ರ ಸಚಿವ ಕುಮಾರಸ್ವಾಮಿ ನಡುವಿನ ಜಟಾಪಟಿಯಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿಲುವುಗಳನ್ನು ಸಚಿವ ಪರಮೇಶ್ವರ್ ಸಮರ್ಥನೆ ಮಾಡಿಕೊಂಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಅವರು, ಸಿಎಂ ಸಿದ್ದರಾಮಯ್ಯ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದ್ದಾರೆ. ಅವರ ಇಡೀ ಜೀವನ ಸಾಮಾಜಿಕ ನ್ಯಾಯದ ಸಿದ್ಧಾಂತದಡಿಯೇ ರಾಜಕಾರಣ ಮಾಡಿಕೊಂಡು ಬಂದಿರೋದು. ಅದರಲ್ಲಿ ಹೊಸದೇನೂ ಇಲ್ಲ. ಅವರ ರಾಜಕೀಯ ಅಡಿಪಾಯವೇ ಸಾಮಾಜಿಕ ನ್ಯಾಯ ಎಂದು ಸಿಎಂ ಪರ ಬ್ಯಾಟಿಂಗ್ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ದಲಿತರನ್ನು ಸಿಎಂ ಮಾಡೋದು ಕಾಂಗ್ರೆಸ್ ಪಕ್ಷನೇ. ಇನ್ಯಾರು ಮಾಡುತ್ತಾರೆ? ಯಾವಾಗ ದಲಿತ ಸಿಎಂ ಮಾಡಬೇಕು ಎಂದು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ವಿಪಕ್ಷಗಳಿಗೆ ತಮ್ಮ ಹುಳುಕು ಮುಚ್ಚಿಕೊಳ್ಳಲು ದಲಿತ ಸಿಎಂ ಕೂಗು ತಂದಿದ್ದಾರೆ ಎಂದು ತಿರುಗೇಟು ನೀಡಿದರು.
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…