ರಾಜ್ಯ

ಸಿದ್ದರಾಮಯ್ಯ ಒಕ್ಕಲಿಗ, ಲಿಂಗಾಯತರನ್ನು ಡಿ ಗ್ರೇಡ್ ಮಾಡ್ತಿದ್ದಾರೆ : ಕುಮಾರಸ್ವಾಮಿ ಆರೋಪ

ಬೆಂಗಳೂರು: ಜಾತಿ ಗಣತಿ ವರದಿ ಇಟ್ಟುಕೊಂಡು ಒಕ್ಕಲಿಗ, ಲಿಂಗಾಯತರನ್ನು ಡಿ ಗ್ರೇಡ್ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಟಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದರು.

ನಗರದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಾತಿ ಜನಗಣತಿ ವರದಿಯನ್ನು ಸಂಪುಟದಲ್ಲಿ ಚರ್ಚೆ ಮಾಡುತ್ತಾರಂತೆ. ಇದು ಕೇವಲ ಎರಡು ಸಮುದಾಯಗಳ ಪ್ರಶ್ನೆ ಅಲ್ಲ. ಇಷ್ಟು ದಿನ ಅಧಿಕಾರದಲ್ಲಿದ್ದ ಸಿದ್ದರಾಮಯ್ಯ ಅವರು ಶೋಷಿತ ಸಮುದಾಯಗಳಿಗೆ ಏನು ಮಾಡಿದ್ದಾರೆ ಎನ್ನುವುದನ್ನು ಹೇಳಬೇಕು ಎಂದು ಒತ್ತಾಯ ಮಾಡಿದರು.

ಯಾವ ಯಾವ ಜಾತಿಯಲ್ಲಿ ಎಷ್ಟು ಜನ ಇದ್ದಾರೆ ಎನುವುದಕ್ಕಿಂತ ಎಷ್ಟು ಜನ ಬಡವರು ಇದ್ದಾರೆ ಎಂಬುದನ್ನು ಗಮನಿಸಬೇಕು. ಇಷ್ಟು ದಿನ ಸರ್ಕಾರದ ಸೌಲಭ್ಯಗಳು ಯಾರಿಗೆ ಸಿಕ್ಕಿವೆ, ಯಾರಿಗೆ ಸಿಕ್ಕಿಲ್ಲ ಎಂಬುದರ ಮೇಲೆ ಸರ್ಕಾರ ಬೆಳಕು ಚೆಲ್ಲಬೇಕು ಎಂದು ಹೇಳಿದರು.

ಇನ್ನೂ ಸಾಕ್ಷ್ಯ ಬೇಕೆ?
60% ಕಮಿಷನ್ ಬಗ್ಗೆ ಮುಖ್ಯಮಂತ್ರಿಗಳು ದಾಖಲೆ ಕೊಡಿ ಎಂದು ನನಗೆ ಹೇಳಿದ್ದರು. ಗುತ್ತಿಗೆದಾರರ ಸಂಘದ ಹಂಗಾಮಿ ಅಧ್ಯಕ್ಷರು ಎಷ್ಟೆಷ್ಟು ಪರ್ಸೆಂಟೇಜ್ ಎಂದು ಅವರೇ ಪಟ್ಟಿ ಮಾಡಿ ಹೇಳಿದ್ದಾರೆ. ಇದಕ್ಕಿಂತ ದಾಖಲೆ ಬೇಕಾ ಎಂದು ಮುಖ್ಯಮಂತ್ರಿಗಳಿಗೆ ಕುಮಾರಸ್ವಾಮಿ ಟಾಂಗ್ ಕೊಟ್ಟರು.

ಸಚಿವ ಪ್ರಿಯಾಂಕ ಖರ್ಗೆ ಮತ್ತು ಕಿಯೋನಿಕ್ಸ್ ಅಧ್ಯಕ್ಷರಿಗೆ ಹೇಳುವುದು ಇಷ್ಟೇ; ತಪ್ಪು ಮಾಡಿದವರ ಮೇಲೆ ಕ್ರಮ ತೆಗೆದುಕೊಳ್ಳಿ. ತಪ್ಪು ಮಾಡದವರಿಗೆ ಶಿಕ್ಷೆ ಯಾಕೆ? ಅವರ ಹಣ ಪಾವತಿ ಮಾಡಿ. ಅಂತಹವರ ಬದು ಏನಾಗಬೇಕು ಎಂಬ ಬಗ್ಗೆ ಒಮ್ಮೆ ಯೋಚನೆ ಮಾಡಿ. ಜನಪ್ರತಿನಿಧಿಗಳು ಸುಳ್ಳು ವ್ಯವಹಾರ ಮಾಡಿದ್ದರೆ ಅವರ ಮೇಲೂ ಕ್ರಮ ತೆಗೆದುಕೊಳ್ಳಿ. ತನಿಖೆ ನಡೆಸಿ ವಾಸ್ತಾವಂಶ ಹೊರಕ್ಕೆ ತರಲು ಎಷ್ಟು ತಿಂಗಳು ಬೇಕು ನಿಮಗೆ? ಈ ರಾಜ್ಯವನ್ನು ಹಾಳು ಮಾಡುತ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದರು.

ತೆರಿಗೆ ಸಂಗ್ರಹದಲ್ಲಿ ಸರ್ಕಾರ ಹಿಂದೆ ಬಿದ್ದಿದೆ
ನಾವು ನುಡಿದಂತೆ ನಡೆದಿದ್ದೇವೆ ಎಂದು ಹೇಳುತ್ತೀರಿ. ಗ್ಯಾರಂಟಿ ಕೊಟ್ಟಿದ್ದೇವೆ ಎನ್ನುತ್ತೀರಿ. ನಮ್ಮನ್ನು ಬಿಟ್ಟರೆ ಬೇರೆ ಯಾರೂ ಇಲ್ಲ ಎನ್ನುತ್ತೀರಿ. ನಿಮ್ಮ ಯಾವ ಕೆಲಸದಲ್ಲಿಯೂ ದಕ್ಷತೆ ಕಾಣುತ್ತಿಲ್ಲ. ನಿರೀಕ್ಷೆಗೆ ತಕ್ಕಂತೆ ತೆರಿಗೆ ಸಂಗ್ರಹ ಆಗುತ್ತಿಲ್ಲ. ಬಜೆಟ್ ಮಂಡನೆಗೆ ತಯಾರಿ ಮಾಡುತ್ತಿದ್ದೀರಿ, ಆದರೆ ತೆರಿಗೆ ಸಂಗ್ರಹದಲ್ಲಿ ಹಿಂದೆ ಬಿದ್ದಿದ್ದೀರಿ. ಎಲ್ಲಾ ಬಾಬ್ತುಗಳಿಂದ ಸುಮಾರು ₹62,424 ಕೋಟಿಯಷ್ಟು ತೆರಿಗೆ ಸಂಗ್ರಹ ಕಡಿಮೆ ಆಗಿದೆ. ಮೇಲಿಂದ ಮೇಲೆ ಸಾಲ ಮಾಡುತ್ತಿದ್ದೀರಿ. ಪೆಟ್ರೋಲ್, ಡೀಸೆಲ್, ಮುದ್ರಾಂಕ, ಮಾರ್ಗದರ್ಶಿ ಶುಲ್ಕ, ವಿದ್ಯುತ್ ದರ, ಬಸ್ ಪ್ರಯಾಣ ದರ, ಮದ್ಯದ ದರ ಸೇರಿದಂತೆ ಎಲ್ಲವನ್ನೂ ಏರಿಕೆ ಮಾಡಿದ್ದೀರಿ. ಇಷ್ಟೆಲ್ಲಾ ಮಾಡಿದರೂ ನಿಮ್ಮ ತೆರಿಗೆ ಸಂಗ್ರಹದಲ್ಲಿ ಕೊರತೆ ಆಗಿದೆ. ನಿಮ್ಮ ಆಡಳಿತ ಯಾವ ಮಟ್ಟಕ್ಕೆ ಹೋಗಿದೆ ಎನ್ನುವುದಕ್ಕೆ ಇದೇ ಸಾಕ್ಷಿ ಎಂದು ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಾಳೆ ಸಂಜೆ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ

ಮುಂಬೈ: ಭಾರತೀಯ ಚಿತ್ರರಂಗದ ಗಾಯಕಿ ಆಶಾ ಭೋಸ್ಲೆ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಆಶಾ ಭೋಸ್ಲೆ ಅವರು…

6 mins ago

ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ…

1 hour ago

ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿ

ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿರುವ ಧಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಣಗುಪ್ಪೆ…

2 hours ago

ಏಪ್ರಿಲ್.‌15ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್.‌15ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

2 hours ago

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶರಾಗಿದ್ದಾರೆ. ಹಿರಿಯ ಗಾಯಕಿ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ…

2 hours ago

ಹೆಬ್ಜುಲ್ಲಾ ಭದ್ರಕೋಟೆ ಟಾರ್ಗೆಟ್‌ ಮಾಡಿ ಇಸ್ರೇಲ್‌ ದಾಳಿ: 11 ಮಂದಿ ಸಾವು

ಬೈರುತ್‌: ಅಮೇರಿಕಾ-ಇರಾನ್‌ ಮಾತುಕತೆ ವಿಫಲವಾದ ಕೆಲವೇ ಗಂಟೆಗಳ ನಂತರ ಹೆಬ್ಜುಲ್ಲಾ ಭದ್ರಕೋಟೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ನಡೆಸಿದ ದಾಳಿಯಲ್ಲಿ 11 ಮಂದಿ…

2 hours ago