ರಾಜ್ಯ

ರಾಜ್ಯದಲ್ಲಿ ಸಿದ್ದರಾಮಯ್ಯ ಯಶಸ್ವಿ ಆಡಳಿತ ನೀಡುತ್ತಿದ್ದಾರೆ: ಡಾ.ಎಚ್.ಸಿ‌ ಮಹದೇವಪ್ಪ

ಮೈಸೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಹಾಗಾಗಿ ಅದರ ಬಗ್ಗೆ ಮಾತನಾಡುವುದು ಅಪ್ರಸ್ತುತ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಯಶಸ್ವಿ ಆಡಳಿತ ನೀಡುತ್ತಿದ್ದಾರೆ. ಮುಖ್ಯಮಂತ್ರಿ ಹುದ್ದೆ ಹಂಚಿಕೆ ವಿಚಾರ ನನಗೆ ತಿಳಿದಿಲ್ಲ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ‌ ಮಹದೇವಪ್ಪ ಹೇಳಿದ್ದಾರೆ.

ನಗರದ ಸರ್ಕಾರಿ ಅತಿಥಿಗೃಹದಲ್ಲಿ ರವಿವಾರ ದಸರಾ ಆಚರಣೆ ಯಶಸ್ವಿ ಹಿನ್ನಲೆಯಲ್ಲಿ ಮಾಧ್ಯಮದವರಿಗೆ ಏರ್ಪಡಿಸಿದ್ದ ಉಪಹಾರ ಕೂಟದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಆಪರೇಷನ್ ಬಿಜೆಪಿ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಂತಹ ಪ್ರಕ್ರಿಯೆ ನಡೆದರೂ ಯಾವುದೇ ಪ್ರಯೋಜನವಾಗುವುದಿಲ್ಲ. 135 ಸ್ಥಾನ ಗಳಿಸಿರುವ ನಮ್ಮ ಅಸ್ಥಿತ್ವ ಅಲುಗಾಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಮಹಿಷ ದಸರಾ ಆಚರಣೆಗೆ ರಾಜ್ಯ ಸರ್ಕಾರ ಪ್ರೋತ್ಸಾಹ ನೀಡಿದೆ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಮಹದೇವಪ್ಪ, ಸಂವಿಧಾನದಲ್ಲಿ ಎಲ್ಲಾ ಆಚರಣೆಗಳಿಗೂ ಅವಕಾಶ ಇದೆ. ಸಂವಿಧಾನವನ್ನು ಅರ್ಥ ಮಾಡಿಕೊಂಡಿದ್ದರೆ ಹೀಗೆಲ್ಲಾ ಮಾತನಾಡುತ್ತಿರಲಿಲ್ಲ. ಅದಕ್ಕಾಗಿಯೇ ನಮ್ಮ ಸರ್ಕಾರ ಸಂವಿಧಾನದ ಪೀಠಿಕೆಯನ್ನು ಶಾಲಾ, ಕಾಲೇಜು ಮಕ್ಕಳಿಗೆ ಕಡ್ಡಾಯವಾಗಿ ಬೋಧಿಸುವಂತೆ ಸೂಚನೆ ನೀಡಿರುವುದು ಎಂದು ಹೇಳಿದರು.

ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರಿಗೆ ಬೆದರಿಕೆ ಕರೆ ಬಂದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಂವಿಧಾನದಲ್ಲಿ ಎಲ್ಲರಿಗೂ ವಾಕ್ ಸ್ವಾತಂತ್ರ್ಯವಿದೆ.‌ ಅದನ್ನು ಹತ್ತಿಕ್ಕಲು ಯಾರಿಂದಲೂ ಸಾಧ್ಯವಿಲ್ಲ. ತಮ್ಮ ತಮ್ಮ ಅಭಿಪ್ರಾಯ ಹೇಳಲು ಕಾನೂನಿನಲ್ಲೇ ಅವಕಾಶ ಇದೆ. ಹಾಗಾಗಿ ಬೆದರಿಕೆ ಕರೆ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದೆ. ಈ ಕುರಿತು ಪೊಲೀಸರು ಕ್ರಮ‌ಜರುಗಿಸಲಿದ್ದಾರೆ ಎಂದರು.

ದಸರಾ ಸಾಂಸ್ಕೃತಿಕ ಕಾರ್ಯಕ್ರಮ ವಿಚಾರಕ್ಕೆ ಸಂಬಂಧಪಟ್ಟಂತೆ ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ ಕಾರ್ಯಕ್ರಮ ನೀಡಲು ಆಮಿಷ ಒಡ್ಡಲಾಗಿತ್ತು ಎಂಬುದು ದೃಢಪಟ್ಟಿಲ್ಲ. ಆದರೆ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

andolanait

Recent Posts

ಮೈಸೂರಿನ ಸಮಗ್ರ ಅಭಿವೃದ್ಧಿಗೆ ಆದ್ಯತೆ

ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ…

12 mins ago

ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ‌ : ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ…

34 mins ago

ಸರ್ಕಾರದ ಆದೇಶ ಕಡೆಗಣಿಸಿ ಏಕಾತ್ಮ ಮಾನವ ದರ್ಶನ ಸಮ್ಮೇಳನ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಆಯೋಜಿಸಿದ್ದ ಮೂರು ದಿನಗಳ 'ಏಕಾತ್ಮ ಮಾನವ ದರ್ಶನ: ಭಾರತದ ವಿಶ್ವದೃಷ್ಟಿ' ಎಂಬ…

42 mins ago

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

14 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

14 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

14 hours ago