ರಾಜ್ಯ

ಸಿದ್ದರಾಮಯ್ಯ ಬೆಂಕಿ ಇದ್ದಂತೆ ಎಂದ ಸಚಿವ ಜಮೀರ್‌ ಅಹಮ್ಮದ್‌ ಖಾನ್‌

ಬಳ್ಳಾರಿ: ಸಿಎಂ ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಭಸ್ಮ ಆಗ್ತಾರೆ ಎಂದು ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಸಿದ್ದು ಪರ ಬ್ಯಾಟ್ ಬೀಸಿದ್ದಾರೆ.

ಈ ಬಗ್ಗೆ ಬಳ್ಳಾರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಅವರು, ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಾಲಿ ಇಲ್ಲ. ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್‌ ಇದ್ದಾರೆ. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದಾರೆ. ಖಾಲಿ ಇದ್ರೆ ತಾನೇ ಈ ಬಗ್ಗೆ ಚರ್ಚೆ ಮಾಡೋದು ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಕುರ್ಚಿ ಮುಟ್ಟೋಕೆ ಯಾರಿಂದಲೂ ಸಾಧ್ಯವಿಲ್ಲ. ಸಿದ್ದರಾಮಯ್ಯ ಬೆಂಕಿ ಇದ್ದಂಗೆ, ಅದನ್ನು ಮುಟ್ಟಿದ್ರೆ ಎಲ್ಲರೂ ಭಸ್ಮವಾಗಿ ಬಿಡುತ್ತಾರೆ ಎಂದು ಎದುರಾಳಿಗಳಿಗೆ ಎಚ್ಚರಿಕೆ ನೀಡಿದರು.

ಇನ್ನು ನಮ್ಮ ಪಕ್ಷ ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧವಾಗಿದೆ. ಹೈಕಮಾಂಡ್‌ ಬದಲಾವಣೆ ಮಾಡಬೇಕು ಎಂದು ನಿರ್ಧಾರ ಮಾಡಿದ್ರೆ ನಾವು ನಮ್ಮ ಅಭಿಪ್ರಾಯ ತಿಳಿಸುತ್ತೇವೆ. ಆದ್ರ ಹೈಕಮಾಂಡ್‌ ಯಾವುದೇ ನಿರ್ಧಾರಕ್ಕೆ ಇನ್ನೂ ಬಂದಿಲ್ಲ ಎಂದು ಸ್ಪಷ್ಟನೆ ನೀಡಿದರು.

 

ಆಂದೋಲನ ಡೆಸ್ಕ್

Recent Posts

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ : ಗ್ರಾ.ಪಂ ಮಾಜಿ ಅಧ್ಯಕ್ಷನ ವಿರುದ್ಧ ದೂರು

ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ…

15 mins ago

ರೈತರಿಗೆ ಸಿಹಿ ಸುದ್ದಿ ; ಕೊಬ್ಬರಿಗೆ ಬೆಂಬಲ ಬೆಲೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ೨೦೨೬ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು…

20 mins ago

ಮಾಗಿ ಚಳಿಯ ಅಬ್ಬರಕ್ಕೆ ರಾಜ್ಯದ ಜನತೆ ಕಕ್ಕಾಬಿಕ್ಕಿ

ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿ.ಸೆ. ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಹೆಚ್ಚಾಗಿರುವ ಮಾಗಿ ಚಳಿಯ ವಾತಾವರಣಕ್ಕೆ ಜನರು…

23 mins ago

ಹುಲಿ ದಾಳಿ; ಹಸು ಸಾವು

ಗುಂಡ್ಲುಪೇಟೆ : ತಾಲ್ಲೂಕಿನಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು ಹಸುವಿನ ಮೇಲೆ ದಾಳಿ ಮಾಡಿದ ವ್ಯಾಘ್ರ ರಕ್ತ ಹೀರಿ ಕೊಂದಿರುವ…

25 mins ago

ಮೈಸೂರು | ಜಿಲ್ಲೆಯಲ್ಲಿ ಅಪೌಷ್ಠಿಕ‌ ಮಕ್ಕಳ ಸಂಖ್ಯೆ ಗಣನೀಯ ಇಳಿಕೆ

ಮೈಸೂರು : NFHS-5 ವರದಿಯ ಪ್ರಕಾರ ಮೈಸೂರು ಜಿಲ್ಲೆಯ SAM ಮಕ್ಕಳ ಪ್ರಮಾಣ 7.2% ಇದ್ದು ಪ್ರಸ್ತುತ 0.21% ಗೆ…

27 mins ago

ಅಧಿಕಾರ ಕಿತ್ತಾಟ ಬಿಟ್ಟು ಅಭಿವೃದ್ಧಿ ಚರ್ಚೆ ನಡೆಯಲಿ : ಶಾಸಕ ಜಿ.ಟಿ.ದೇವೇಗೌಡ

ಮೈಸೂರು : ರಾಜ್ಯದಲ್ಲಿ ನಾಯಕತ್ವ, ಅಧಿಕಾರ ಹಂಚಿಕೆ ಕಿತ್ತಾಟ ಬಿಟ್ಟು ರಾಜ್ಯದ ಸರ್ವತೋಮುಖ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯಲಿ ಎಂದು…

31 mins ago