ಬಳ್ಳಾರಿ: ಸಿಎಂ ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಭಸ್ಮ ಆಗ್ತಾರೆ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಸಿದ್ದು ಪರ ಬ್ಯಾಟ್ ಬೀಸಿದ್ದಾರೆ.
ಈ ಬಗ್ಗೆ ಬಳ್ಳಾರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು, ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಾಲಿ ಇಲ್ಲ. ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಇದ್ದಾರೆ. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದಾರೆ. ಖಾಲಿ ಇದ್ರೆ ತಾನೇ ಈ ಬಗ್ಗೆ ಚರ್ಚೆ ಮಾಡೋದು ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಕುರ್ಚಿ ಮುಟ್ಟೋಕೆ ಯಾರಿಂದಲೂ ಸಾಧ್ಯವಿಲ್ಲ. ಸಿದ್ದರಾಮಯ್ಯ ಬೆಂಕಿ ಇದ್ದಂಗೆ, ಅದನ್ನು ಮುಟ್ಟಿದ್ರೆ ಎಲ್ಲರೂ ಭಸ್ಮವಾಗಿ ಬಿಡುತ್ತಾರೆ ಎಂದು ಎದುರಾಳಿಗಳಿಗೆ ಎಚ್ಚರಿಕೆ ನೀಡಿದರು.
ಇನ್ನು ನಮ್ಮ ಪಕ್ಷ ಹೈಕಮಾಂಡ್ ನಿರ್ಧಾರಕ್ಕೆ ಬದ್ಧವಾಗಿದೆ. ಹೈಕಮಾಂಡ್ ಬದಲಾವಣೆ ಮಾಡಬೇಕು ಎಂದು ನಿರ್ಧಾರ ಮಾಡಿದ್ರೆ ನಾವು ನಮ್ಮ ಅಭಿಪ್ರಾಯ ತಿಳಿಸುತ್ತೇವೆ. ಆದ್ರ ಹೈಕಮಾಂಡ್ ಯಾವುದೇ ನಿರ್ಧಾರಕ್ಕೆ ಇನ್ನೂ ಬಂದಿಲ್ಲ ಎಂದು ಸ್ಪಷ್ಟನೆ ನೀಡಿದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…