Mysore
28
few clouds

Social Media

ಬುಧವಾರ, 17 ಡಿಸೆಂಬರ್ 2025
Light
Dark

ರಾಜೀನಾಮೆ ನೀಡಲು ಸಿದ್ದರಾಮಯ್ಯ ಮಾನಸಿಕವಾಗಿ ಸಿದ್ಧವಾಗುತ್ತಿದ್ದಾರೆ: ಸಂಸದ ಬಸವರಾಜ ಬೊಮ್ಮಾಯಿ

ಗದಗ: ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್‌ ಪಕ್ಷದಲ್ಲಿ ಬಹಳಷ್ಟು ಚಟುವಟಿಕೆ ನಡೆಯುತ್ತಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ.

ಈ ಬಗ್ಗೆ ಗದಗದಲ್ಲಿ ಮಾತನಾಡಿದ ಅವರು, ವಿಶೇಷವಾಗಿ ಹಿರಿಯ ಸಚಿವರು ದೆಹಲಿ ಭೇಟಿ ಮಾಡುವುದು ನೋಡಿದರೆ ಗೊತ್ತಾಗುತ್ತದೆ. ವಿರೋಧ ಪಕ್ಷಕ್ಕಿಂತ ಹೆಚ್ಚಾಗಿ ಆಡಳಿತ ಪಕ್ಷದವರೇ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ ಎಂದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಮುಂದೆ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರಲ್ಲ. ಹೀಗಾಗಿ ಸರ್ಕಾರ ಉಳಿಸಿಕೊಳ್ಳಲು ಸತತ ಹಾಗೂ ನಿರಂತರ ಪ್ರಯತ್ನ ಮಾಡಲಾಗುತ್ತಿದೆ.

ರಾಜ್ಯದಲ್ಲಿ ಆಡಳಿತ ಸಂಪೂರ್ಣ ಸ್ಥಗಿತವಾಗಿದ್ದು, ಅಭಿವೃದ್ಧಿ ಕೆಲಸಗಳು ಸಂಪೂರ್ಣವಾಗಿ ನಿಂತುಹೋಗಿವೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

ಇನ್ನು ನಾವಂತೂ ಈ ಸರ್ಕಾರವನ್ನು ಅಭದ್ರಗೊಳಿಸುವ ಕೆಲಸವನ್ನು ಮಾಡಲ್ಲ. ಸರ್ಕಾರ ಅದಾಗಿಯೇ ಪತನವಾಗುತ್ತದೆ ಎಂದು ಭವಿಷ್ಯ ನುಡಿದರು.

 

Tags:
error: Content is protected !!