ಗದಗ: ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಬಹಳಷ್ಟು ಚಟುವಟಿಕೆ ನಡೆಯುತ್ತಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ.
ಈ ಬಗ್ಗೆ ಗದಗದಲ್ಲಿ ಮಾತನಾಡಿದ ಅವರು, ವಿಶೇಷವಾಗಿ ಹಿರಿಯ ಸಚಿವರು ದೆಹಲಿ ಭೇಟಿ ಮಾಡುವುದು ನೋಡಿದರೆ ಗೊತ್ತಾಗುತ್ತದೆ. ವಿರೋಧ ಪಕ್ಷಕ್ಕಿಂತ ಹೆಚ್ಚಾಗಿ ಆಡಳಿತ ಪಕ್ಷದವರೇ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ ಎಂದರು.
ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲ್ಲ. ಹೀಗಾಗಿ ಸರ್ಕಾರ ಉಳಿಸಿಕೊಳ್ಳಲು ಸತತ ಹಾಗೂ ನಿರಂತರ ಪ್ರಯತ್ನ ಮಾಡಲಾಗುತ್ತಿದೆ.
ರಾಜ್ಯದಲ್ಲಿ ಆಡಳಿತ ಸಂಪೂರ್ಣ ಸ್ಥಗಿತವಾಗಿದ್ದು, ಅಭಿವೃದ್ಧಿ ಕೆಲಸಗಳು ಸಂಪೂರ್ಣವಾಗಿ ನಿಂತುಹೋಗಿವೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.
ಇನ್ನು ನಾವಂತೂ ಈ ಸರ್ಕಾರವನ್ನು ಅಭದ್ರಗೊಳಿಸುವ ಕೆಲಸವನ್ನು ಮಾಡಲ್ಲ. ಸರ್ಕಾರ ಅದಾಗಿಯೇ ಪತನವಾಗುತ್ತದೆ ಎಂದು ಭವಿಷ್ಯ ನುಡಿದರು.
ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…
ಬೆಳಗಾವಿ : ಮುಂದಿನ ಮಾರ್ಚ್‌ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…
ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…
ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…