ದಾವಣಗೆರೆ: ಸಿಎಂ ಬದಲಾವಣೆ ವಿಚಾರ ಪಕ್ಷದ ಮುಂದೆ ಇಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ಈ ಕುರಿತು ದಾವಣಗೆರೆಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಆಗಿ ಸಿದ್ದರಾಮಯ್ಯ ಇದ್ದಾರೆ. ಅವರೇ ಮುಂದುವರಿಯುತ್ತಾರೆ. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಗಟ್ಟಿಯಾಗಿರುತ್ತಾರೆ. ಬದಲಾವಣೆ ವಿಷಯ ಪಕ್ಷದ ಮುಂದೆ ಇಲ್ಲ. ಅಂತೆ ಕಂತೆ ಮಾತೇಕೆ? ಯಾವುದೇ ಗೊಂದಲ ಇರಬಾರದೆಂದು ಸಿಎಂ ಹಾಗೂ ಡಿಸಿಎಂ ಬ್ರೇಕ್‌ಫಾಸ್ಟ್ ನಡೆಸಿದ್ದಾರೆ. ಹೈಕಮಾಂಡ್ ಹೇಗೆ ಹೇಳುತ್ತೋ ಹಾಗೆ ಸರ್ಕಾರ ನಡೆಸುತ್ತೇವೆ ಎಂದು ಹೇಳಿದರು.
ಇದನ್ನು ಓದಿ: ಗ್ರಾಮ ಭಾರತ ಅಭಿವೃದ್ಧಿಯಾಗದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ
ಇನ್ನು 2028ಕ್ಕೆ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ನಮ್ಮ ಸರ್ಕಾರ ಸ್ಥಿರ. ಸಿಎಂ ಮುಂದುವರಿಕೆಯಲ್ಲಿ ಯಾವ ಸಂದೇಹವೂ ಇಲ್ಲ. ಸಿದ್ದರಾಮಯ್ಯ ಮುಂದುವರೆಯುತ್ತಾರೆ ಎಂದು ಹೇಳಿದರು.





