ಬೆಂಗಳೂರು: ವೈಟ್ನರ್ ಬಳಿದಿದ್ದ ದಾಖಲೆಗಳಿಗೆ ಟಾರ್ಚ್ ಹಾಕಿ ತೋರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಶಿಶುಪಾಲನ ಹಾಗೆ ತಪ್ಪಿನ ತಪ್ಪು ಮಾಡುತ್ತಿದ್ದೀರಿ ಚಾಟಿ ಬೀಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು; ವೈಟ್ನರ್ ಅಡಿಯಲ್ಲಿ ಅಡಗಿಸಿಟ್ಟಿದ್ದ ಅಕ್ಷರಗಳಿಗೆ ಟಾರ್ಚ್ ಹಾಕಿ ತಡಕಾಡುತ್ತಿರುವುದು ಈ ರಾಜ್ಯದ ಘನತೆವೆತ್ತ ಮುಖ್ಯಮಂತ್ರಿಗಳಿಗೆ ಶೋಭೆಯಲ್ಲ ಎಂದು ಕಟುವಾಗಿ ಟೀಕಿಸಿದ್ದಾರೆ.
ಇದು ಮೂಲ ದಾಖಲೆ, ಮೂಡಾದಲ್ಲಿದೆ. ನಿಮ್ಮ ಬಳಿಗೆ ಹೇಗೆ ಬಂತು? ನಿಮಗೆ ಈ ಮೂಲ ದಾಖಲೆ ತಂದು ಕೊಟ್ಟ ಮಹಾಶಯರು ಯಾರು? ಇಷ್ಟಕ್ಕೂ ಈ ಮೂಲ ದಾಖಲೆ ಮೂಡಾದಲ್ಲಿದೆಯಾ? ಅಥವಾ ನಿಮ್ಮ ಮನೆಯಲ್ಲಿದೆಯಾ? ಈ ಮೂಲ ದಾಖಲೆಗೆ ಟಾರ್ಚ್ ಹಾಕಿದವರು ಯಾರು? ನೀವಾ..? ಅಥವಾ ಇನ್ನಾರಾದರೂ ಇದ್ದಾರಾ? ಎಂದು ಪ್ರಶ್ನಿಸಿದ್ದಾರೆ ಅವರು.
ನನ್ನ ಪ್ರಶ್ನೆ ಇಷ್ಟೇ, ಈ ದಾಖಲೆಯನ್ನೇಕೆ ನೀವು ಕೋರ್ಟ್‌ಗೆ ಕೊಟ್ಟಿಲ್ಲ!? ನ್ಯಾಯಾಲಯವನ್ನೂ ದಾರಿ ತಪ್ಪಿಸುತ್ತಿದ್ದೀರಿ. ಜನರನ್ನು ದಿಕ್ಕು ತಪ್ಪಿಸಿದ ಹಾಗೇ ನ್ಯಾಯಾಲಯಕ್ಕೂ ಸುಳ್ಳು ಮಾಹಿತಿ ಕೊಟ್ಟು ಅಲ್ಲಿಯೂ ಟಾರ್ಚ್ ಬಿಟ್ಟು ತೋರಿಸುತ್ತೀರಾ.., ಹೇಗೆ? ಎಂದು ಸಿಎಂ ಅವರ ಕಾಲೆಳೆದಿದ್ದಾರೆ ಸಚಿವರು.
ತಪ್ಪಿನ ಮೇಲೆ ತಪ್ಪು ಮಾಡುತ್ತಿದ್ದೀರಿ.. ಶಿಶುಪಾಲನ ಹಾಗೆ ಮಾಡಿದ ತಪ್ಪು ಮುಚ್ಚಿಕೊಳ್ಳಲು ಮತ್ತೆ ಮತ್ತೆ ತಪ್ಪು ಮಾಡುತ್ತಿದ್ದೀರಿ ಎಂದು ಎಚ್‌ಡಿ ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…