ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಲ್ಲಿ ನಡೆದಿರುವ ಅಕ್ರಮ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಆಗ್ರಹಿಸಿದರು.
ನಗರದಲ್ಲಿಂದು (ಆ.13) ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಡಾ ಹಗರಣದ ನೈತಿಕ ಹೊಣೆಹೊತ್ತು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಆ ಮೂಲಕ ಪಾರದರ್ಶಕ ತನಿಖೆಗೆ ಸಹಕರಿಸಬೇಕು ಎಂದು ಹೇಳಿದರು.
ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಆಡಳಿತಾವಧಿಯಲ್ಲಿನ ಪ್ರಕರಣಗಳನ್ನು ತನಿಖೆ ನಡೆಸುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಕಳೆದ ಎರಡು ತಿಂಗಳಿನಿಂದ ಹೇಳಿಕೆ ನೀಡುತ್ತಲೇ ಬರುತ್ತಿದ್ದಾರೆ. ಆದರೆ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ನಮ್ಮ ಅವಧಿಯಲ್ಲಿನ ಹಗರಣಗಳನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಕೂಡಲೇ ತನಿಖೆ ನಡೆಸಿ ಫಲಿತಾಂಶ ಹೊರಡಿಸಲಿ ಎಂದು ಬಹಿರಂಗ ಸವಾಲು ಹಾಕಿದರು.
ಇನ್ನು ಬಿಜೆಪಿಯಲ್ಲಿ ಎರಡು ಬಣಗಳಾಗಿದ್ದು, ಕೆಲವರು ಪ್ರತ್ಯೇಕ ಪಾದಯಾತ್ರೆಗೆ ಸಿದ್ದತೆ ನೆಡಸಿಕೊಳ್ಳುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಪಕ್ಷಕ್ಕೆ ಶಕ್ತಿ ಬರುತ್ತದೆ ಎಂದಾದರೇ ಮಾಡಲಿ ಇದಕ್ಕೆ ನಮ್ಮ ತಕರಾರು ಏನಿಲ್ಲ. ಈ ಎಲ್ಲದರ ಬಗ್ಗೆ ಹೈ ಕಮಾಂಡ್ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ಅವರು ಏನೇ ಮಾಡಿದರು ಪಕ್ಷಕ್ಕೆ ಪೂರಕವಾಗಿ ಸಂಘಟನೆಗೆ ಲಾಭವಾಗುವುದಾದರೇ ಮಾಡಲಿ ಎಂದು ನುಣುಚಿಕೊಂಡರು.
ಮಂಡ್ಯ: ರಾಜಕಾರಣಿಗಳನ್ನು ಹೆದರಿಸ ಬಲ್ಲಂತಹ ಶಕ್ತಿ ಸಾಹಿತ್ಯಕ್ಕಿದೆ. ಹಾಗಾಗಿ ರಾಜ ಕಾರಣಿಗಳು ಹಾದಿ ತಪ್ಪದಂತೆ ಸಾಹಿತಿಗಳು ಎಚ್ಚರಿಸಬೇಕು ಎಂದು ಕಾನೂನು…
ಮಂಡ್ಯ: ಪಾರ್ಸೆಲ್ ಕೊಡುವ ನೆಪದಲ್ಲಿ ಬಂದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಮೇಶ್…
ಬೆಂಗಳೂರು: ನಿವೃತ್ತ ಸಾರಿಗೆ ನೌಕರರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಗ್ರಾಚ್ಯುಟಿ ಹಣವನ್ನು ಬಿಡುಗಡೆ ಮಾಡಿದೆ. ಗ್ರಾಚ್ಯುಟಿ ಮತ್ತು ಗಳಿಕೆ…
ಬೆಂಗಳೂರು: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆಯನ್ನು ಸಿಎಂ ಸಿದ್ದರಾಮಯ್ಯ ದುರುಪಯೋಗಪಡಿಸಿಕೊಂಡಿದ್ದಾರೆ…
ಹೈದರಾಬಾದ್: ಡಿಸೆಂಬರ್.4ರಂದು ಸಂಧ್ಯಾ ಥಿಯೇಟರ್ ಬಳಿ ನಡೆದ ಕಾಲ್ತುಳಿತದಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು ದುರದೃಷ್ಟಕರ ಎಂದು ನಟ ಅಲ್ಲು ಅರ್ಜುನ್ ಬೇಸರ…