ರಾಜ್ಯ

ಎಂಎಲ್‌ಸಿ ರವಿಕುಮಾರ್‌ ನಾಲಿಗೆ ಉದ್ದವಾಗಿದೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿಯ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರ ನಾಲಿಗೆ ಉದ್ದವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರವಿಕುಮಾರ್ ಹೇಳಿಕೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯ ಕಾರ್ಯದರ್ಶಿ ವಿರುದ್ಧ ರವಿಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಪ್ರಶ್ನೆ ಎದುರಾಗುತ್ತಿದ್ದಂತೆ ಅವರ ನಾಲಿಗೆ ಜಾಸ್ತಿಯಾಯಿತು ಎಂದು ಸಿಟ್ಟಾದರು. ಹೆಚ್ಚಿನ ಪ್ರತಿಕ್ರಿಯೆ ನೀಡದೇ ತಮ್ಮ ಮಾತನ್ನು ಅರ್ಧಕ್ಕೆ ನಿಲ್ಲಿಸಿ ಅಲ್ಲಿಂದ ನಿರ್ಗಮಿಸಿದರು.

ಇದೇ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಎನ್.ರವಿಕುಮಾರ್ ಅವರ ನಾಲಗೆ ಉದ್ದವಾಯಿತು ಎಂಬರ್ಥದಲ್ಲಿ ಸಿಡಿಮಿಡಿ ವ್ಯರ್ಥಪಡಿಸಿರುವುದು ಪ್ರಕರಣದ ಗಂಭೀರತೆಯನ್ನು ಹೆಚ್ಚಿಸಿದೆ.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

43 mins ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

52 mins ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

7 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

7 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

7 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

7 hours ago