ಬೆಂಗಳೂರು: ನಿನ್ನೆ ( ಫೆಬ್ರವರಿ 27 ) ವಿಧಾನಸೌಧದಲ್ಲಿ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ವಿಧಾನಸಭೆ ಸದಸ್ಯರು ಮತದಾನ ಮಾಡಿದರು. ಈ ಪೈಕಿ ಓರ್ವ ಬಿಜೆಪಿ ಅಭ್ಯರ್ಥಿ ಹಾಗೂ ಮೂವರು ಕಾಂಗ್ರೆಸ್ ಅಭ್ಯರ್ಥಿಗಳು ಜಯ ಸಾಧಿಸಿದರು. ಇನ್ನು ಫಲಿತಾಂಶ ಹೊರಬಿದ್ದ ಬಳಿಕ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಸಂಭ್ರಮಾಚರಣೆ ವೇಳೆ ಬೆಂಬಲಿಗರಲ್ಲಿ ಕೆಲವರು ಪಾಕಿಸ್ತಾನ ಪರ ಘೋಷಣೆ ಕೂಗಿದರು ಎಂಬ ಆರೋಪ ಕೇಳಿಬಂದಿದೆ.
ಈ ಕುರಿತು ವಿಡಿಯೊ ಸಹ ಹರಿದಾಡುತ್ತಿದೆ. ಇನ್ನು ಕಾಂಗ್ರೆಸ್‌ನ ಕೆಲವರು ಇದರಲ್ಲಿ ನಾಸಿರ್ ಹುಸೇನ್ ಜಿಂದಾಬಾದ್ ಹಾಗೂ ಕಾಂಗ್ರೆಸ್ ಜಿಂದಾಬಾದ್ ಎಂದು ಕೂಗುತ್ತಿದ್ದಾರೆಯೋ ಹೊರತು ಪಾಕಿಸ್ತಾನ ಜಿಂದಾಬಾದ್ ಎಂದಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಸ್ವತಃ ನಾಸಿರ್ ಹುಸೇನ್ ಸಹ ಈ ಕುರಿತು ಮಾತನಾಡಿ ಇದೇ ರೀತಿಯ ಹೇಳಿಕೆಯನ್ನು ನೀಡಿದ್ದಾರೆ. ಅಲ್ಲದೇ ಒಂದುವೇಳೆ ಯಾರಾದರೂ ಘೋಷಣೆ ಕೂಗಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದೂ ಸಹ ಹೇಳಿದ್ದಾರೆ.
ಸದ್ಯ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಮಾತನಾಡಿದ್ದು ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಸಾಬೀತಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು, ದೇಶ ದ್ರೋಹಿಗಳನ್ನು ಮಟ್ಟ ಹಾಕಬೇಕಿದೆ ಎಂದು ತಿಳಿಸಿದರು. ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆಯೇ ಎಂಬುದು ಮೊದಲು ಸಾಬೀತಾಗಬೇಕಿದೆ. ಅದಕ್ಕಾಗಿ ವಿಡಿಯೊ ತುಣುಕುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ತನಿಖೆಗೆ ಕಳುಹಿಸಿಕೊಟ್ಟಿದ್ದೇನೆ. ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ತಪ್ಪಿತಸ್ಥರು ಯಾರೇ ಆಗಿರಲಿ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…