ರಾಜ್ಯ

ಪಾಕ್‌ ಪರ ಘೋಷಣೆ ಆರೋಪ; ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು: ನಿನ್ನೆ ( ಫೆಬ್ರವರಿ 27 ) ವಿಧಾನಸೌಧದಲ್ಲಿ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ವಿಧಾನಸಭೆ ಸದಸ್ಯರು ಮತದಾನ ಮಾಡಿದರು. ಈ ಪೈಕಿ ಓರ್ವ ಬಿಜೆಪಿ ಅಭ್ಯರ್ಥಿ ಹಾಗೂ ಮೂವರು ಕಾಂಗ್ರೆಸ್‌ ಅಭ್ಯರ್ಥಿಗಳು ಜಯ ಸಾಧಿಸಿದರು. ಇನ್ನು ಫಲಿತಾಂಶ ಹೊರಬಿದ್ದ ಬಳಿಕ ಕಾಂಗ್ರೆಸ್‌ ಅಭ್ಯರ್ಥಿ ನಾಸಿರ್‌ ಹುಸೇನ್‌ ಸಂಭ್ರಮಾಚರಣೆ ವೇಳೆ ಬೆಂಬಲಿಗರಲ್ಲಿ ಕೆಲವರು ಪಾಕಿಸ್ತಾನ ಪರ ಘೋಷಣೆ ಕೂಗಿದರು ಎಂಬ ಆರೋಪ ಕೇಳಿಬಂದಿದೆ.

ಈ ಕುರಿತು ವಿಡಿಯೊ ಸಹ ಹರಿದಾಡುತ್ತಿದೆ. ಇನ್ನು ಕಾಂಗ್ರೆಸ್‌ನ ಕೆಲವರು ಇದರಲ್ಲಿ ನಾಸಿರ್‌ ಹುಸೇನ್‌ ಜಿಂದಾಬಾದ್‌ ಹಾಗೂ ಕಾಂಗ್ರೆಸ್‌ ಜಿಂದಾಬಾದ್‌ ಎಂದು ಕೂಗುತ್ತಿದ್ದಾರೆಯೋ ಹೊರತು ಪಾಕಿಸ್ತಾನ ಜಿಂದಾಬಾದ್‌ ಎಂದಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಸ್ವತಃ ನಾಸಿರ್ ಹುಸೇನ್‌ ಸಹ ಈ ಕುರಿತು ಮಾತನಾಡಿ ಇದೇ ರೀತಿಯ ಹೇಳಿಕೆಯನ್ನು ನೀಡಿದ್ದಾರೆ. ಅಲ್ಲದೇ ಒಂದುವೇಳೆ ಯಾರಾದರೂ ಘೋಷಣೆ ಕೂಗಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದೂ ಸಹ ಹೇಳಿದ್ದಾರೆ.

ಸದ್ಯ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಮಾತನಾಡಿದ್ದು ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಸಾಬೀತಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು, ದೇಶ ದ್ರೋಹಿಗಳನ್ನು ಮಟ್ಟ ಹಾಕಬೇಕಿದೆ ಎಂದು ತಿಳಿಸಿದರು. ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆಯೇ ಎಂಬುದು ಮೊದಲು ಸಾಬೀತಾಗಬೇಕಿದೆ. ಅದಕ್ಕಾಗಿ ವಿಡಿಯೊ ತುಣುಕುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ತನಿಖೆಗೆ ಕಳುಹಿಸಿಕೊಟ್ಟಿದ್ದೇನೆ. ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ತಪ್ಪಿತಸ್ಥರು ಯಾರೇ ಆಗಿರಲಿ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

andolana

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

5 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

6 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

7 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

7 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

10 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

11 hours ago