ಚಿತ್ರದುರ್ಗ(ಹೊಸದುರ್ಗ) ಫೆಬ್ರವರಿ 9: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ನೀಡಿರುವ ದೇಶ ವಿಭಜನೆಗೆ ಕರೆ ನೀಡಿದವರನ್ನು ಮಾಡುವವರನ್ನು ಗುಂಡಿಟ್ಟು ಕೊಲ್ಲಬೇಕು ಎಂಬ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ ಕಿಡಿಕಾರಿದ್ದಾರೆ.
ಕಡಿ, ಬಡಿ, ಕತ್ತರಿಸು, ಕೊಲ್ಲು ಎಂಬ ಭಾಷೆ ಬಳಸುವ ಒಂದು ರಾಜಕೀಯ ಪಕ್ಷದ ಮುಖಂಡರು, ಆರ್.ಎಸ್.ಎಸ್. ನಲ್ಲಿ ತರಬೇತಿಯಾಗಿದೆ ಎಂದು ಹೇಳಿಕೊಳ್ಳುವವರನ್ನು ರಾಜಕೀಯ ಧುರೀಣರು ಎಂದು ಕರೆಯಬೇಕೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಈಶ್ವರಪ್ಪನವರಿಗೆ ಕಡಿ, ಬಡಿ, ಕತ್ತರಿಸು, ಕೊಲ್ಲು ಇದು ಬಿಟ್ಟರೆ ಬೇರೆ ಭಾಷೆ ಗೊತ್ತಿಲ್ಲ. ನನಗೆ ಆರ್.ಎಸ್.ಎಸ್ ನಲ್ಲಿ ತರಬೇತಿಯಾಗಿದೆ ಎನ್ನುತ್ತಾರೆ. ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದರು. ಡಿ.ಕೆ.ಸುರೇಶ್ ಅವರನ್ನು ಗುಂಡಿಟ್ಟು ಕೊಲ್ಲಿ ಎಂದು ಹೇಳುವುದು ಒಂದು ರಾಜಕೀಯ ಪಕ್ಷದ ಮುಖಂಡರಾಗಿ ಹೇಳುವ ಮಾತೇ ಎಂದು ಪ್ರಶ್ನಿಸಿದರು. ಇವರನ್ನು ರಾಜಕೀಯ ಧುರೀಣರು ಎಂದು ಕರೆಯಬೇಕೇ ಎಂದರು.