ರಾಜ್ಯ

ಕಾನೂನು ಉಲ್ಲಂಘನೆ ಮಾಡಿದ್ರೆ ಅರೆಸ್ಟ್‌ ಮಾಡ್ತಾರೆ; ಪ್ರತಾಪ್‌ ಸಿಂಹ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ

ಮರ ಕತ್ತರಿಸಿ ಸಾಗಿಸಿದ ಪ್ರಕರಣದಲ್ಲಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರನ್ನು ಅರಣ್ಯ ಅಧಿಕಾರಿಗಳು ನಿನ್ನೆ ಬಂಧಿಸಿದ್ದರು. ಸದ್ಯ ಜಾಮೀನು ಮಂಜೂರಾದ ಕಾರಣ ವಿಕ್ರಂ ಸಿಂಹ ಹೊರಬಂದಿದ್ದಾರೆ. ಇದಕ್ಕೂ ಮುನ್ನ ಇಂದು ಬೆಳಗ್ಗೆ ಈ ಪ್ರಕರಣದ ಕುರಿತು ಮಾತನಾಡಿದ್ದ ಪ್ರತಾಪ್‌ ಸಿಂಹ ನೇರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡಿದ್ದರು.

ಸಿದ್ದರಾಮಯ್ಯನವರು ತನ್ನ ಮಗ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಬೇಕೆಂಬ ಉದ್ದೇಶದಿಂದ ನನ್ನ ಹಾಗೂ ನನ್ನ ಕುಟುಂಬವನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಕುರಿತು ಇದೀಗ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ “ಯಾರು ಕಾನೂನನ್ನು ಉಲ್ಲಂಘನೆ ಮಾಡ್ತಾರೋ ಅವರನ್ನು ಅರೆಸ್ಟ್‌ ಮಾಡ್ತಾರೆ, ಸುಮ್ಮನೆ ಯಾಕೆ ಅರೆಸ್ಟ್‌ ಮಾಡ್ತಾರೆ? ನಮ್ಮ ಸರ್ಕಾರದಲ್ಲಿ ಯಾವುದೇ ನಿರಪರಾಧಿಗೂ ತೊಂದರೆಯಾಗೋಕೆ ಬಿಡಲ್ಲ. ನಿರಪರಾಧಿಗಳ ಮೇಲೆ ಕಾನೂನು ಕ್ರಮ ಪ್ರಯೋಗ ಮಾಡಲ್ಲ. ಯಾರು ಅಪರಾಧ ಮಾಡ್ತಾರೋ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ” ಎಂದರು.

andolana

Recent Posts

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ: ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಯುವ ಮುಖಂಡ ನಿಶಾಂತ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…

1 hour ago

ಹನೂರು| ಗೋಪಿನಾಥಂ ಸಫಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ಕೊಟ್ಟ ಹುಲಿರಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…

4 hours ago

ಇರಾನ್ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ಇಸ್ರೇಲ್

ಟೆಹರಾನ್‌: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…

5 hours ago

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಸಿದ್ದರಾಮಯ್ಯ ಖಂಡನೆ

ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…

5 hours ago

ಖಮೇನಿ ಹತ್ಯೆ ಖಂಡಿಸಿ ಭಾರತದಲ್ಲೂ ಪ್ರತಿಭಟನೆ

ಜಮ್ಮು-ಕಾಶ್ಮೀರ: ಇಸ್ರೇಲ್‌ ಮತ್ತು ಅಮೇರಿಕಾ ಇರಾನ್‌ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…

6 hours ago

ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆ: ಏನದು ಗೊತ್ತಾ.?

ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…

6 hours ago