Resign and Fulfill the Aspirations of Kannadigas: Opposition Leader R. Ashoka
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು, ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕೆ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯ ಸರ್ಕಾರದ ಕೃಷಿ ಸಚಿವರು ನಾಲ್ಕನೇ ಬಾರಿಗೆ ಶಾಸಕರಾಗಿ ಆರಿಸಿ ಬಂದಿರುವವರು ತಮ್ಮ ಕ್ಷೇತ್ರದ ಪರಿಶಿಷ್ಟ ಪಂಗಡಗಳ ಕಾಲೋನಿ ಅಭಿವೃದ್ಧಿಗೆ ಕೇವಲ 2 ಕೋಟಿ ರೂಪಾಯಿ ಅನುದಾನ ಪಡೆಯಲು ಸಿಎಂ ಬಳಿ ಅಂಗಲಾಚಬೇಕು ಅಂದರೆ ಕರ್ನಾಟಕ ಸರ್ಕಾರ ಎಷ್ಟು ದಿವಾಳಿ ಆಗಿದೆ ಎನ್ನುವುದನ್ನು ನೀವೇ ಊಹಿಸಿಕೊಳ್ಳಿ ಎಂದು ಲೇವಡಿ ಮಾಡಿದರು.
ಇದನ್ನು ಓದಿ:ಜೈಲಿನಲ್ಲಿ ಲೈಬ್ರರಿ ಕ್ಲರ್ಕ್ ಆದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ
ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಅವರು ಅನುದಾನಕ್ಕಾಗಿ ಸಿಎಂ ಕಾಲಿಗೆ ಬೀಳಬೇಕು ಎನ್ನುತ್ತಾರೆ. ಪ್ರತಿಯೊಬ್ಬ ಶಾಸಕರು ಅನುದಾನ ವಿಚಾರವಾಗಿ ಒಂದಲ್ಲಾ ಒಂದು ಮಾತುಗಳನ್ನು ಹೇಳುತ್ತಿದ್ದಾರೆ.
ಇಷ್ಟೆಲ್ಲಾ ಆದರೂ ಸಿಎಂ ಸಿದ್ದರಾಮಯ್ಯನವರೇ ಈ ಭಂಡ ಬಾಳು. ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ ಎಂದು ಆರ್.ಅಶೋಕ್ ಬರೆದುಕೊಂಡಿದ್ದಾರೆ.
ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…