Mysore
22
mist

Social Media

ಭಾನುವಾರ, 07 ಡಿಸೆಂಬರ್ 2025
Light
Dark

ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ| ಗುರಿ ಸಾಧಿಸದಿದ್ದರೆ ಶಿಸ್ತು ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವರ್ಗಾವಣೆ ವೇಳೆ ತೆರಿಗೆ ಸಂಗ್ರಹದಲ್ಲಿ ನಿಮ್ಮ ಕಾರ್ಯಕ್ಷಮತೆಯನ್ನು ಮಾನದಂಡವಾಗಿ ನಾನು ಪರಿಗಣಿಸುತ್ತೇನೆ. ಬೇರೆ ಯಾವ ಪ್ರಭಾವಕ್ಕೂ ನಾನು ಮಣೆ ಹಾಕಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ವಾಣಿಜ್ಯ ತೆರಿಗೆ ಇಲಾಖೆ ಮತ್ತು ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ವೇಳೆ ಈ ಎಚ್ಚರಿಕೆ ನೀಡಿದರು.

ಗುರಿ ಸಾಧಿಸದಿದ್ದರೆ ಶಿಸ್ತು ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆ. ವರ್ಗಾವಣೆ ವೇಳೆ ನಿಮ್ಮ ಕಾರ್ಯಕ್ಷಮತೆಯೇ ಮಾನದಂಡ. ಬೇರೆ ಯಾವ ಪ್ರಭಾವಕ್ಕೂ ನಾನು ಮಣೆ ಹಾಕಲ್ಲ. ಅಂದಾಜು, ಜಾರಿ, ಮೇಲ್ಮನವಿ ತಂಡಗಳು ನಿರಂತರ ಸಹಕಾರದಿಂದ ಕೆಲಸ ಮಾಡಿ ಎಂದು ಸೂಚನೆ ನೀಡಿದರು.

ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಇತರೆ ಹೈಲೈಟ್ಸ್!

ಮೇಲ್ಮನವಿ ಪ್ರಕರಣಗಳನ್ನು 3 ತಿಂಗಳೊಳಗೆ ವಿಲೇವಾರಿ ಮಾಡಬೇಕು. ವಿಳಂಬ ಮಾಡಿದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು

IGST ನಕಾರಾತ್ಮಕ ಸೆಟಲ್ ಮೆಂಟ್ ಆಗುವ ಕಡೆ ಇತರೆ ಸರಕುಗಳ ಮೇಲಿನ ತೆರಿಗೆ ಸಂಗ್ರಹವನ್ನು ಚುರುಕಗೊಳಿಸಬೇಕು

ಕೆಲಸ ಮರು ಹಂಚಿಕೆ 2017 ಕ್ಕೂ ಹಿಂದಿನ ಪ್ರಕರಣಗಳ ತೀರ್ಮಾನವಾಗಿರುವುದರಿಂದ ಬೆಂಗಳೂರಿನಲ್ಲಿ ಹೆಚ್ಚು ಮೇಲ್ಮನವಿಗಳು ದಾಖಲಾಗುತ್ತಿದ್ದು, ಇವುಗಳ ವಿಲೇವಾರಿಗಾಗಿ ಹೆಚ್ಚುವರಿ ಜಂಟಿ ಆಯುಕ್ತರ ಹುದ್ದೆ ಮಂಜೂರಾಗಿದ್ದು ಜುಲೈ 1 ರಿಂದ ಜಾರಿಗೆ ಬರಲಿದೆ

ವೃತ್ತಿ ತೆರಿಗೆ ಸಂಗ್ರಹವನ್ನೂ ಚುರುಕುಗೊಳಿಸಲು ಗುರಿ ನಿಗಧಿ ಪಡಿಸಲು ಸೂಚನೆ

ಅಂದಾಜು, ಜಾರಿ, ಮೇಲ್ಮನವಿ ಸಮನ್ವಯ ಸಭೆ ತಿಂಗಳಿಗೆ 2 ಬಾರಿ ಕಡ್ಡಾಯವಾಗಿ ನಡೆಸಬೇಕು. Action plan ಸಿದ್ದಪಡಿಸಬೇಕು. ಮೇಲ್ಮನವಿಗಳನ್ನು ಸಕಾಲದಲ್ಲಿ ಇತ್ಯರ್ಥ ಮಾಡಬೇಕು

ಸೆಪ್ಟೆಂಬರ್ ಮೊದಲ ವಾರದಲ್ಲಿ ಮತ್ತೊಮ್ಮೆ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತೇನೆ. ಆ ವೇಳೆಗೆ ಗುರಿ ತಲುಪಿರಬೇಕು

ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್, ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತೆ ಸಿ.ಶಿಖಾ ಉಪಸ್ಥಿತರಿದ್ದರು

Tags:
error: Content is protected !!