Categories: ರಾಜ್ಯ

ರಾಜ್ಯಕ್ಕೆ ಸಮೃದ್ಧ ಬಂಡವಾಳ ಹರಿವು, ಸದ್ಯದಲ್ಲೇ ದೇಶದಲ್ಲಿ 2ನೇ ಸ್ಥಾನಕ್ಕೆ: ಸಿದ್ದರಾಮಯ್ಯ

ಬೆಂಗಳೂರು: ಕೈಗಾರಿಕಾ ಕ್ಷೇತ್ರದ ಬಂಡವಾಳ ಹೂಡಿಕೆಯಲ್ಲಿ ರಾಜ್ಯವು ಸದ್ಯಕ್ಕೆ ದೇಶದಲ್ಲಿ ಮೂರನೇ ಸ್ಥಾನದಲ್ಲಿದ್ದು, 2025ರ ಜೂನ್ ವೇಳೆಗೆ ದ್ವಿತೀಯ ಸ್ಥಾನಕ್ಕೆ ಏರಲಿದೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಅವರು ಜಿಕೆವಿಕೆ ಆವರಣದಲ್ಲಿ ಆಯೋಜನೆಗೊಂಡಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮೆಟಲ್ಸ್ ಸಂಸ್ಥೆಯ 78ನೇ ವಾರ್ಷಿಕ ತಾಂತ್ರಿಕ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಈಗ ಆಗಿರುವ 54,427 ಕೋಟಿ ರೂ. ಹೂಡಿಕೆಯ ಜತೆಗೆ ಮುಂದಿನ ಆರೇಳು ತಿಂಗಳಲ್ಲಿ ಇನ್ನೂ 19,059 ಸಾವಿರ ಕೋಟಿ ರೂ. ಬಂಡವಾಳ ಹರಿದು ಬರುವುದು ಖಾತ್ರಿಯಾಗಿದೆ. ಈ ಮೂಲಕ ರಾಜ್ಯವು 73 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಹೂಡಿಕೆಯನ್ನು ಕಾಣಲಿದೆ ಎಂದರು.

ರಾಜ್ಯವು ಈ ವರ್ಷ ಈಗಾಗಲೇ 21 ವಿವಿಧ ಉದ್ಯಮಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ. ಇದರಿಂದ 46,375 ಕೋಟಿ ರೂ. ಬಂಡವಾಳ ಹರಿದು ಬರಲಿದ್ದು, 27 ಸಾವಿರಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿವೆ. ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿಗಳ ಮೂಲಕ 90 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಹೂಡಿಕೆ ಆಗಲಿರುವಂತಹ ಒಟ್ಟು 669 ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ ಕೊಡಲಾಗಿದೆ. ಇವುಗಳಿಂದಾಗಿ 1.73 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗಾವಕಾಶಗಳು ದೊರೆಯಲಿವೆ ಎಂದು ಅವರು ವಿವರಿಸಿದರು.

ಕೈಗಾರಿಕಾ ಅಭಿವೃದ್ಧಿಯ ಜತೆಯಲ್ಲೇ ಪರಿಸರ ಸಂರಕ್ಷಣೆ ಮತ್ತು ಎಲ್ಲರನ್ನೂ ಒಳಗೊಂಡಿರುವ ಬೆಳವಣಿಗೆಗಳ ಜತೆಗೆ ಸಮತೋಲನ ಸಾಧಿಸುವ ಸವಾಲು ನಮ್ಮ ಮುಂದಿದೆ. ಮೆಟಲ್ಸ್ (ಲೋಹಗಳು) ಮತ್ತು ಮೆಟಿರೀಯಲ್ಸ್ ವಲಯಗಳಲ್ಲಿ ಇವೆಲ್ಲವನ್ನೂ ಸಾಧ್ಯವಾಗಿಸುವಂತಹ ಸಂಶೋಧನೆ ಮತ್ತು ನಾವೀನ್ಯತಾ ಉಪಕ್ರಮಗಳಿಗೆ ಸರಕಾರವು ಒತ್ತು ನೀಡುತ್ತಿದೆ ಎಂದು ಅವರು ನುಡಿದಿದರು.

ಮೆಟಲ್ಸ್ ಮತ್ತು ಮೆಟೀರಿಯಲ್ಸ್ ಕ್ಷೇತ್ರವೂ ಸೇರಿದಂತೆ ಎಲ್ಲ ವಲಯಗಳಲ್ಲೂ ಕರ್ನಾಟಕವು ಪರಿಸರಸ್ನೇಹಿ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುತ್ತಿದೆ. ಲೋಹ ಮತ್ತು ಅದಕ್ಕೆ ಪೂರಕವಾದ ವಲಯಗಳು ಆರ್ಥಿಕ ಅಭಿವೃದ್ಧಿಯ ಆಚೆಗೂ ತಮ್ಮ ಪ್ರಭಾವ ಬೀರುತ್ತವೆ. ಕ್ಷಿಪ್ರವಾಗಿ ಬೆಳವಣಿಗೆ ಕಾಣುತ್ತಿರುವ ಜಗತ್ತಿನಲ್ಲಿ ಉದ್ಭವಿಸುತ್ತಿರುವ ಸಂಕೀರ್ಣ ಸಮಸ್ಯೆಗಳಿಗೆ ಉದ್ಯಮಿಗಳು ಸರಿಯಾದ ಪರಿಹಾರವನ್ನು ಕಂಡುಕೊಳ್ಳಬೇಕಾದ ಅಗತ್ಯವಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾತನಾಡಿ, `ರಾಜ್ಯ ಸರಕಾರವು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮಾತ್ರವಲ್ಲದೆ ಸೆಮಿಕಂಡಕ್ಟರ್, ವಿದ್ಯುನ್ಮಾನ, ಚಿಪ್ ವಿನ್ಯಾಸ, ನವೋದ್ಯಮ, ವಿದ್ಯುಚ್ಚಾಲಿತ ವಾಹನ ಮುಂತಾದ ಕ್ಷೇತ್ರಗಳಿಗೆ ಸಂಬಂಧಿಸಿದಂತೆಯೂ ಸಮರ್ಥ ನೀತಿಗಳನ್ನು ಹೊಂದಿದೆ. ಪ್ರತಿಭಾವಂತ ಮಾನವ ಸಂಪನ್ಮೂಲವನ್ನು ಕೌಶಲಪೂರ್ಣವನ್ನಾಗಿಸಿ, ಅವರೆಲ್ಲರನ್ನೂ ಉದ್ಯೋಗಕ್ಕೆ ಅರ್ಹರನ್ನಾಗಿ ಸಜ್ಜುಗೊಳಿಸಲಾಗುವುದು’ ಎಂದರು.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮಾತನಾಡಿ, ಉದ್ಯಮ ಕ್ಷೇತ್ರದಲ್ಲಿ ಈಗ ಡಿಜಿಟಲ್ ಉತ್ಪಾದನೆ, ಕೃತಕ ಬುದ್ಧಿಮತ್ತೆ ಮತ್ತು ಆಟೋಮೇಶನ್ ನಿರ್ಣಾಯಕವಾಗಿದ್ದು ಹೊಸ ಬಗೆಯ ಶಕ್ತಿಸಾಮರ್ಥ್ಯಗಳನ್ನು ತಂದುಕೊಟ್ಟಿವೆ. ಸುಧಾರಿತ ಅಲಾಯ್ಸ್, ಅತ್ಯಧಿಕ ಸಾಮರ್ಥ್ಯದ ಉಕ್ಕು ಮತ್ತು ಸುಸ್ಥಿರ ಮೆಟೀರಿಯಲ್ ಗಳಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ. ಈ ವಲಯದಲ್ಲಿ ರಾಜ್ಯದ ಹಲವು ನವೋದ್ಯಮಗಳು ಆಟೋಮೋಟೀವ್, ವೈಮಾಂತರಿಕ್ಷ, ಹಗುರ ಅಲಾಯ್ ಗಳಲ್ಲಿ ಸಂಶೋಧನೆಯಲ್ಲಿ ತೊಡಗಿಸಿಕೊಂಡಿವೆ ಎಂದರು.

ರಾಜ್ಯವು ಹೆವಿ ಎಂಜಿನಿಯರಿಂಗ್, ವಿದ್ಯುತ್ ಉತ್ಪಾದನೆ ಮತ್ತು ಸ್ಪೆಷಲ್ ಪರ್ಪಸ್ ಮಷಿನರಿ ಕ್ಷೇತ್ರಗಳ ತಾಣವಾಗಿದೆ. ಮಶೀನ್ ಟೂಲ್ ತಯಾರಿಕೆಯಲ್ಲಿ ದೇಶದ ಒಟ್ಟು ಉತ್ಪಾದನೆಯಲ್ಲಿ ಶೇ.52ರಷ್ಟು ಕೊಡುಗೆ ನೀಡುತ್ತಿದೆ. ಈ ಮೂಲಕ ಸ್ಥಳೀಯ ಮತ್ತು ಜಾಗತಿಕ ಮಾರುಕಟ್ಟೆಯ ಬೇಡಿಕೆಗಳನ್ನು ಏಕಕಾಲಕ್ಕೆ ಪೂರೈಸಲಾಗುತ್ತಿದೆ. ಲೋಹ ಮತ್ತು ಮೆಟೀರಿಯಲ್ಸ್ ವಲಯಗಳ ಬೇಡಿಕೆಗಳನ್ನು ಸರಕಾರವು ಸಕಾರಾತ್ಮಕವಾಗಿ ಪರಿಗಣಿಸಿ, ಎಲ್ಲ ಬಗೆಯ ಪ್ರೋತ್ಸಾಹಗಳನ್ನೂ ಕೊಡಲಿದೆ ಎಂದು ಅವರು ಭರವಸೆ ನೀಡಿದರು.

ಐಐಎಂ ಅಧ್ಯಕ್ಷ ಸಜ್ಜನ್ ಜಿಂದಾಲ್, ಜಿಂದಾಲ್ ಅಧ್ಯಕ್ಷ ಪಿ.ಕೆ.ಮುರುಗನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

4 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

5 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

5 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

6 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

6 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

10 hours ago