ರಾಯಚೂರು: ಸಿಎಂ ಸಿದ್ದರಾಮಯ್ಯರಿಗೆ ಕನ್ನಡರಾಮಯ್ಯ ಎಂದು ಹೆಸರಿಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ಈ ಬಗ್ಗೆ ರಾಯಚೂರಿನಲ್ಲಿ ಮಾತನಾಡಿದ ಅವರು, ಈ ಹಿಂದೆ ಮಾಜಿ ಸಿಎಂ ಡಿ.ದೇವರಾಜು ಅರಸು ಅವರ ಕಾಲದಲ್ಲಿ ಐದು ವರ್ಷಗಳ ಹಿಂದೆ ಕರ್ನಾಟಕ ನಾಮಕರಣಗೊಂಡಿತ್ತು. ಇದೀಗ ಆಧುನಿಕ ದೇವರಾಜ ಅರಸು ಎನಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತದ ಸಮಯದಲ್ಲಿಯೇ ರಾಜ್ಯ ಸರ್ಕಾರದಿಂದ ಕರ್ನಾಟಕ ಸಂಭ್ರಮ-50ನ್ನು ಆಚರಿಸಲಾಗುತ್ತಿದ್ದು, ರಾಜ್ಯದ ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷರಾದವರು ಸಿದ್ದರಾಮಯ್ಯ. ಸಿದ್ದರಾಮಯ್ಯ ಅವರ ಸಹಿ ಕನ್ನಡದಲ್ಲಿ ಇವೆ. ಕಡತಗಳು ಕೂಡ ಕನ್ನಡದಲ್ಲಿ ಇರಬೇಕು ಎಂದು ಆದೇಶವನ್ನು ಹೇಳಿದರು. ನವೆಂಬರ್.1ರೊಳಗಾಗಿ ವಿಧಾನಸೌಧದ ಮುಂದೆ ಭುವನೇಶ್ವರಿ ಪ್ರತಿಮೆ ಮಾಡಲು ಹೇಳಿದ್ದಾರೆ. ಅಲ್ಲದೇ ವಿಧಾನಸೌಧದಲ್ಲಿ ನಮಗೆ ಸಂಧಿ ಮತ್ತು ವ್ಯಾಕರಣದ ಮಾಹಿತಿ ಬಗ್ಗೆ ತಿಳಿಸುತ್ತಾರೆ ಎಂದರು.
ಸಿಎಂ ಸಿದ್ದರಾಮಯ್ಯ ಅವರು ಕನ್ನಡದ ಬಗ್ಗೆ ಅಪಾರ ಪ್ರೀತಿ ಹೊಂದಿದ್ದಾರೆ. ಹೀಗಾಗಿ ಅವರನ್ನು ಕನ್ನಡರಾಮಯ್ಯ ಎಂದು ಕರೆಯಬೇಕು. ಹೆಸರಾಯ್ತು ಕರ್ನಾಟಕ, ಉಸಿರಾಯ್ತು ಕನ್ನಡ ಎಂಬ ಕಾರ್ಯಕ್ರಮದಡಿಯಲ್ಲಿ ಈ ವರ್ಷ ನವೆಂಬರ್.1ರೊಳಗಾಗಿ ನಾಲ್ಕು ಕಾರ್ಯಕ್ರಮ ಮಾಡಲು ಚಿಂತನೆ ಮಾಡಿದ್ದೇವೆ. ಪ್ರಥಮ ಕಾರ್ಯಕ್ರಮ ಮೈಸೂರಿನಿಂದ ಮಾಡಲಾಗಿದೆ. ಹೀಗಾಗಿ ಮೈಸೂರಿನಲ್ಲಿ 15 ಗೋಷ್ಠಿಗಳನ್ನು ಮಾಡಲಾಗಿದೆ. ಮಹಾರಾಷ್ಟ್ರದ ಗಡಿ ಭಾಗದಲ್ಲಿ ಯಶಸ್ವಿ ಕನ್ನಡ ಕಾರ್ಯಕ್ರಮ ಮಾಡಲಾಗಿದೆ. ಆದರೆ ಇದೀಗ ಕಲ್ಯಾಣ ರಾಜ್ಯದ ಗಡಿ ಭಾಗವಾದ ರಾಯಚೂರಿನಲ್ಲಿ ಇದು ಮೂರನೇ ಕಾರ್ಯಕ್ರಮವಾಗಿದೆ. ಗೋಕಾಕ್ ಚಳುವಳಿ ಹಿನ್ನೋಟ-ಮುನ್ನೋಟ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ. ಈ ಕುರಿತು…
ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…
ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…
ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…
ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…