ಬೆಂಗಳೂರು: ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲೇ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರು ಹೇಳಿದರು.
ಗುರುವಾರ (ಜೂನ್.27) ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 515 ನೇ ಜನ್ಮದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸಿಎಂ ಸಿದ್ದರಾಮಯ್ಯ ಅವರು ಮುಂದೆ ತಮ್ಮ ಮುಖ್ಯಮಂತ್ರಿ ಸ್ಥಾನಮಾನವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಬೇಕು. ಸಿಎಂ ಸಿದ್ದರಾಮಯ್ಯ ಅವರು ಮನಸ್ಸು ಮಾಡಿದರೇ ಮಾತ್ರ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲು ಸಾಧ್ಯ. ಸಿದ್ದರಾಮಯ್ಯ ಅವರು ಈಗಾಗಲೇ ಸಿಎಂ ಆಗಿ ಅನುಭವ ಹೊಂದಿದ್ದಾರೆ. ಮುಂದೆ ನಮ್ಮ ಸಮುದಾಯದ ಡಿಕೆ ಶಿವಕುಮಾರ್ ಅವರಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಹೇಳಿದರು.
ಚಂದ್ರಶೇಖರನಾಥ ಸ್ವಾಮೀಜಿ ಅವರು ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಮಾತನಾಡುವಾಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಅಕ್ಕಪಕ್ಕದಲ್ಲಿಯೇ ಕುಳಿತಿದ್ದರು ಏನು ಮಾತನಾಡದೇ ಮೌನವಾಗಿದ್ದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…