Mysore
16
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ಬಸವಣ್ಣನನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ: ಸಿಎಂ ಸಿದ್ದರಾಮಯ್ಯ

siddaramaiah basava jayanthi

ಬೆಂಗಳೂರು: ಬಸವಣ್ಣನನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರಿಂದು ಬೆಂಗಳೂರಿನಲ್ಲಿ ಬಸವ ಸಮಿತಿ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇದನ್ನೂ ಓದಿ:- ಸಿಎಂ ಸಿದ್ದರಾಮಯ್ಯ ಏಕೆ ಅಷ್ಟೊಂದು ಉದ್ವೇಗಕ್ಕೆ ಒಳಗಾದರು ಎಂಬುದು ಗೊತ್ತಿಲ್ಲ: ಸಚಿವ ಜಿ.ಪರಮೇಶ್ವರ್‌

ಸರ್ಕಾರ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುವ ಸಲುವಾಗಿ ಸಾಂಸ್ಕೃತಿಕ ನಾಯಕ ಎಂದು ಗುರುತಿಸಿದೆ. ಬಸವಣ್ಣ ವಿಶ್ವ ಗುರುಗಳಾಗಿದ್ದು, ಅವರು ಕೇವಲ ಸಾಮಾಜಿಕ ಕ್ರಾಂತಿ ಮಾಡಿದವರಲ್ಲ. ಸಮಾಜದ ಪರಿವರ್ತನೆಗೆ ಇತಿಹಾಸದಲ್ಲಿ ಶಾಶ್ವತವಾಗಿ ನೆಲೆಸುವ, ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುವ ಕೆಲಸವನ್ನು ಬಸವಣ್ಣ ತಮ್ಮ ಜೀವಿತ ಕಾಲದಲ್ಲಿ ಮಾಡಿದ್ದಾರೆ ಎಂದು ತಿಳಿಸಿದ ಅವರು ಜನತೆಗೆ ಬಸವ ಜಯಂತಿಯ ಶುಭಾಶಯಗಳನ್ನು ತಿಳಿಸಿದರು.

Tags:
error: Content is protected !!