ರಾಜ್ಯ

ಆಡಳಿತಾಧಿಕಾರಿಗಳ ಹುದ್ದೆ ಖಾಲಿ ಇಲ್ಲದಂತೆ ಭರ್ತಿ ಮಾಡಲಾಗುವುದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ, ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರಿಂದು ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ ಮತ್ತು 4000 ಕ್ರೋಮ್ ಬುಕ್ ವಿತರಣೆ ಹಾಗೂ ಸಾಧನೆಯ ಹಾದಿಯಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು.

ಹಿಂದೆ 94-95ರಲ್ಲಿ ಗೋವಿಂದೇಗೌಡರು ಇದ್ದ ಸಂದರ್ಭದಲ್ಲಿ ಒಂದು ಲಕ್ಷ ಉಪಾಧ್ಯಾಯರನ್ನು ಲಂಚವಿಲ್ಲದೇ, ಮಧ್ಯವರ್ತಿಗಳಿಲ್ಲದೇ ನೇಮಕಾತಿ ಮಾಡಲಾಗಿತ್ತು. ಪ್ರಸ್ತುತ ಆರು ಲಕ್ಷ ಅರ್ಜಿಗಳಲ್ಲಿ ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿಗಳು ಆಯ್ಕೆಯಾಗಿದ್ದು, ಆಯ್ಕೆಯಾಗಿರುವವರು ಪುಣ್ಯವಂತರು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪರೀಕ್ಷೆಯಲ್ಲಿ ಮೆರಿಟ್ ಆಧಾರದ ಮೇಲೆ ಆಯ್ಕೆಯಾಗಿದ್ದೀರಿ. 9834 ಒಟ್ಟು ಗ್ರಾಮ ಆಡಳಿತಾಧಿಕಾಗಳಿದ್ದು, ಅದರಲ್ಲಿ 8003 ಜನ ಕಾರ್ಯನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ:- ಸಿದ್ದರಾಮಯ್ಯರ ರಾಜಕೀಯ ಪ್ರಯಾಣ ಅವಕಾಶವಾದಕ್ಕೆ ಎತ್ತಿ ಹಿಡಿದ ಕೈ: ನಿಖಿಲ್‌ ಕುಮಾರಸ್ವಾಮಿ

ಈಗ 1000 ಜನ ಸೇರ್ಪಡೆಯಾಗುತ್ತಿದ್ದಾರೆ. ಯಾವುದೇ ಗ್ರಾಮ ಆಡಳಿತಾಧಿಕಾರಿಯ ಹುದ್ದೆ ಖಾಲಿ ಇಲ್ಲದಂತೆ ಭರ್ತಿ ಮಾಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. ಅಲ್ಲೇ ಇದ್ದು ಸಾಧ್ಯವಾದಷ್ಟು ಮಟ್ಟಿಗೆ ಗ್ರಾಮಗಳಲ್ಲಿಯೇ ವಾಸ ಮಾಡುವುದು ಉತ್ತಮ ಎಂದರು.

ಇನ್ನು ಗ್ರಾಮ ಆಡಳಿತಾಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ, ರೈತರಿಗೆ ಅನ್ಯಾಯವಾಗದಂತೆ ಕರ್ತವ್ಯ ನಿರ್ವಹಿಸಬೇಕು. ಜಮೀನಿನ ದಾಖಲಾತಿಗಳ ಹಾಗೂ ಸರ್ವೇಗಳು ಸಮರ್ಪಕವಾಗಿ ನಡೆದರೆ ಗ್ರಾಮಗಳಲ್ಲಿ ಭೂಮಿ ಕಲಹವಿಲ್ಲದೇ ಬಹುಮಟ್ಟಿಗೆ ನೆಮ್ಮದಿ ನೆಲಸಲು ಸಾಧ್ಯವಿದೆ.

ಇಂದು ನೇಮಕಗೊಂಡಿರುವ ಗ್ರಾಮ ಆಡಳಿತಾಧಿಕಾರಿಗಳು ಉದಾಸೀನತೆಯ ಭಾವನೆಯನ್ನು ತಳೆಯದೇ ಪ್ರಾಮಾಣಿಕವಾಗಿ ದುಡಿಯಬೇಕು ಎಂದು ತಿಳಿಸಿ ಶುಭಹಾರೈಸಿದರು.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

9 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

9 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

10 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

11 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

14 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

15 hours ago