ರಾಜ್ಯ

ಇದು ಸೇಡಿನ ರಾಜಕಾರಣದ ಮುಂದುವರಿದ ಭಾಗ: ಸಿದ್ದರಾಮಯ್ಯ

  • ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ ವಿಚಾರ
  • ದೋಷಾರೋಪ ಪಟ್ಟಿ ವಿರುದ್ದ ಸಿದ್ದರಾಮಯ್ಯ ಕಿಡಿ
  • ಸೇಡಿನ ರಾಜಕಾರಣದ ಮುಂದುವರಿದ ಭಾಗವಾಗಿದೆ ಎಂದ ಸಿಎಂ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್‌ ಗಾಂಧಿ ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ ಕ್ರಮ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್‌ ಶಾ ಅವರ ಸೇಡಿನ ರಾಜಕಾರಣದ ಮುಂದುವರಿದ ಭಾಗವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

 

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಇದು ಕೇವಲ ನಮ್ಮ ಪಕ್ಷದ ಇಬ್ಬರು ನಾಯಕರ ಇಲ್ಲವೇ ಕಾಂಗ್ರೆಸ್ ಪಕ್ಷದ ವಿರುದ್ಧದ ಸೇಡಿನ ಕ್ರಮ ಅಲ್ಲ, ಇದು ವಿರೋಧದ ದನಿಯನ್ನು ಸಹಿಸುವುದಿಲ್ಲ ಎಂಬ ಎಚ್ಚರಿಕೆಯನ್ನು ದೇಶದ ವಿರೋಧ ಪಕ್ಷಗಳು ಮತ್ತು ಪ್ರಜಾಪ್ರಭುತ್ವ‌ ಪ್ರೇಮಿ ನಾಗರಿಕರಿಗೆ ನರೇಂದ್ರ ಮೋದಿ ಸರ್ಕಾರ ನೀಡಿರುವ ಎಚ್ಚರಿಕೆಯಾಗಿದೆ. ದ್ವೇಷದ ರಾಜಕಾರಣವನ್ನು ಎದುರಿಸುತ್ತಲೇ ಬಂದಿರುವ ಕಾಂಗ್ರೆಸ್ ಪಕ್ಷ ಇದನ್ನು ಕೂಡಾ ಸತ್ಯ ಮತ್ತು ನ್ಯಾಯದ ಬಲದಿಂದ ಎದುರಿಸಲಿದೆ.

ಸ್ವಾಯತ್ತ ತನಿಖಾ ಸಂಸ್ಥೆಯಾದ ಇಡಿಯನ್ನು ವಿರೋಧ ಪಕ್ಷದ ನಾಯಕರ ವಿರುದ್ಧ ದ್ವೇಷ ಸಾಧಿಸಲು ಆಯುಧವನ್ನಾಗಿ ಬಳಸುತ್ತಾ ಬಂದಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈಗ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆಯಾಗಿರುವ ಸುಳ್ಳು ಆರೋಪವನ್ನು ಬಳಸಿಕೊಂಡಿದೆ. ಇದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಆದೇಶದಂತೆಯೇ ಈ ದ್ವೇಷದ ರಾಜಕಾರಣ ನಡೆಯುತ್ತಿದೆ ಎನ್ನುವುದು ಸ್ಪಷ್ಟವಾಗಿದೆ.

ಸುದ್ದಿ ಹಿನ್ನೆಲೆ:- ನ್ಯಾಷನಲ್ ಹೆರಾಲ್ಡ್ ಪ್ರಕರಣ: ರಾಹುಲ್ ಗಾಂಧಿ, ಸೋನಿಯಾ ಗಾಂಧಿ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ

ವಿಚಾರಣೆಯ ನೆಪದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರು ಸೇರಿದಂತೆ ನಮ್ಮ ಪಕ್ಷದ ಪ್ರಮುಖ ನಾಯಕರಿಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡಿ ಪೀಡಿಸಿದ ಇ.ಡಿಯು ಅದರಿಂದ ಯಾವುದೇ ಫಲ ಸಿಗದೆ ಇದ್ದಾಗ ಕಲ್ಪಿತ ಕತೆಗಳನ್ನು ಕಟ್ಟಿ ಆರೋಪ ಪಟ್ಟಿ ಸಲ್ಲಿಸಿದೆ.

ಇದನ್ನೂ ಓದಿ:- ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸರ್ವಾಧಿಕಾರಿ ಧೋರಣೆಯ ವಿರುದ್ದ ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನೂ ಬೀದಿಗೆ ಇಳಿದು ಇದನ್ನು ಪ್ರತಿಭಟಿಸಲಿದ್ದಾರೆ. ಈ ಪ್ರತಿರೋಧಕ್ಕೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜೆಯೂ ಕೈಜೋಡಿಸಬೇಕಾಗಿದೆ ಎಂದು ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸರಗೂರು| ಕಾಡಾನೆ ದಾಳಿ: ದೇವಸ್ಥಾನದ ಕಾವಲುಗಾರ ಸಾವು

ಸರಗೂರು: ಬಹುರ್ದೆಸೆಗೆಂದು ಬಯಲಿಗೆ ತೆರಳಿದ್ದ ವ್ಯಕ್ತಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು…

47 mins ago

ಓದುಗರ ಪತ್ರ: ವಾಲ್ಮೀಕಿ ಭವನ ಉದ್ಘಾಟಿಸಿ

ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿ ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗದೇ ಇರುವುದರಿಂದ ಸಾರ್ವಜನಿಕರು…

4 hours ago

ಓದುಗರ ಪತ್ರ: ಬಾಳೆಕೆರೆ ಗ್ರಾಮದಲ್ಲಿ ರಸ್ತೆ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ…

4 hours ago

ಓದುಗರ ಪತ್ರ: ಸಾರಿಗೆ ಬಸ್ಸುಗಳು ಸಕಾಲಕ್ಕೆ ನಿಗದಿತ ಸ್ಥಳ ತಲುಪಲಿ

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಂಚರಿಸುವ ಕೆಲವು ಸಾರಿಗೆ ನಿಗಮದ ಬಸ್ಸುಗಳು ಹಾಗೂ ಮೈಸೂರು ಮತ್ತು, ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ…

4 hours ago

ಓದುಗರ ಪತ್ರ: ಮಕ್ಕಳಲ್ಲಿ ಸ್ವಯಂ ಪ್ರೇರಿತ ಓದು ಅವಶ್ಯ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸಂಜೆ ೭ರಿಂದ ರಾತ್ರಿ ೯ ರವರೆಗೆ ಎಲ್ಲ ಮನೆಗಳಲ್ಲೂ ಟಿವಿ…

4 hours ago

ನಿಯಮ ಮೀರಿ ನಿರ್ಮಿಸಿರುವ ಕಟ್ಟಡ ತೆರವಿಗೆ ಸೂಚನೆ

ಗಾಲ್ಫ್ ಕ್ಲಬ್ ಆಡಳಿತ ಮಂಡಳಿಗೆ ಮೈಸೂರು ನಗರಪಾಲಿಕೆ ನೋಟಿಸ್ ಮೈಸೂರು: ನಗರದ ಜಯಚಾಮರಾಜ ಒಡೆಯರ್ ಗಾಲ್ಛ್ ಕ್ಲಬ್ ಆವರಣದಲ್ಲಿ ನಿಯ ಮಾವಳಿ…

4 hours ago