siddaramaiah terrorism
ಬಾಗಲಕೋಟೆ : ಪಾಕಿಸ್ತಾನದ ಮೇಲೆ ಯುದ್ಧ ಅನಿವಾರ್ಯವಾದರೆ ಯುದ್ಧ ಮಾಡಬೇಕು ಅದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಭಯೋತ್ಪಾದನೆಯ ಮೂಲೋಚ್ಚಾಟನೆಯಾಗಬೇಕು. ಎಲ್ಲರಿಗೂ ಭದ್ರತೆಯನ್ನು ಕೇಂದ್ರ ಸರ್ಕಾರ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕೂಡಲಸಂಗಮ ಸಭಾಭವನ ಹತ್ತಿರ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಹಿಂದೆ ಇಂದಿರಾ ಗಾಂಧಿಯವರು 1971ರಲ್ಲಿ ಯುದ್ಧ ಮಾಡಿ ಪಾಕಿಸ್ತಾನವನ್ನು ಬಗ್ಗು ಬಡಿದಿದ್ದರು. ಪಾಕಿಸ್ತಾನದ ಸುಮಾರು 80 ಸಾವಿರ ಸೈನಿಕರು ಶರಣಾಗತರಾಗಿದ್ದರು ಎಂದರು.
ಸಾಮಾಜಿಕ ನ್ಯಾಯ ಒದಗಿಸಲು ಸಾಮಾಜಿಕ ಆರ್ಥಿಕ ಸಮೀಕ್ಷೆ ಮುಖ್ಯ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಜಾತಿ ಗಣತಿ ಆಗಬೇಕೆಂದು ಹೇಳಿದ್ದು, ಕೇಂದ್ರ ಸರ್ಕಾರ ಜಾತಿ ಗಣತಿ ಮಾಡುತ್ತಾರೋ ಅಥವಾ ಸಾಮಾಜಿಕ ಆರ್ಥಿಕ ಸಮೀಕ್ಷೆ ಮಾಡುತ್ತಾರೋ ತಿಳಿದಿಲ್ಲ. ಕೇಂದ್ರ ಸರ್ಕಾರ ಜಾತಿ ಮತ್ತು ಜನಗಣತಿ ಮಾಡುವುದಾಗಿ ಹೇಳಿದೆ. ಸಾಮಾಜಿಕ ನ್ಯಾಯ ಒದಗಿಸಲು ಸಾಮಾಜಿಕ ಆರ್ಥಿಕ ಸಮೀಕ್ಷೆ ಯಾಗಬೇಕಿರುವುದು ಬಹಳ ಮುಖ್ಯ ಎಂದರು.
ಸಾಮಾಜಿಕ, ಶೈಕ್ಷಣಿಕ ಆರ್ಥಿಕ ಸಮೀಕ್ಷೆಯನ್ನು ಸಚಿವ ಸಂಪುಟದಲ್ಲಿ ಮಂಡಿಸಲಾಗಿದ್ದು, ಈ ಬಗ್ಗೆ ಸಚಿವರು ಲಿಖಿತವಾಗಿ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸುವುದಾಗಿ ತಿಳಿಸಿದ್ದು, ಅದು ಸಲ್ಲಿಕೆಯಾದ ನಂತರ ಪುನಃ ಸಚಿವ ಸಂಪುಟ ಕರೆದು ಚರ್ಚೆ ಮಾಡುತ್ತೇವೆ ಎಂದರು.
ಮಾನಹಾನಿ ಮಾಡಬಾರದು ಮೋದಿಯವರ ತಲೆ ಇಲ್ಲದ ಚಿತ್ರ ಹಾಕಿ ಕಾಂಗ್ರೆಸ್ ಪಕ್ಷ ಟ್ವೀಟ್ ಮಾಡಿದ್ದು, ಅದನ್ನು ತೆಗೆದಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಸಾಮಾಜಿಕ ಮಾಧ್ಯಮದಲ್ಲಿ ನರೇಂದ್ರ ಮೋದಿಯವರದ್ದಾಗಲಿ ಬೇರೆ ಯಾರದ್ದೇ ಆಗಲಿ ಮಾಡಬಾರದು. ವಾಕ್ ಮತ್ತು ವ್ಯಕ್ತಿ ಸ್ವಾತಂತ್ರ್ಯ ಇದೆ ಎಂದು ಇನ್ನೊಬ್ಬರ ಮಾನಹಾನಿ ಮಾಡಬಾರದು ಎಂದರು.
ಕೇಂದ್ರ ಸರ್ಕಾರದ ತೀರ್ಮಾನಕ್ಕೆ ನಮ್ಮ ಬೆಂಬಲ ಇದೆ ಉಗ್ರರ ದಾಳಿಯ ನಂತರ ಕೇಂದ್ರ ಸರ್ಕಾರದ ರಾಜತಾಂತ್ರಿಕ ನಡೆಯಿಂದಾಗಿ ತಾಯಿ ಮಕ್ಕಳು ಅಗಲಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಕೇಂದ್ರ ಸರ್ಕಾರದ ತೀರ್ಮಾನಕ್ಕೆ ನಮ್ಮ ಬೆಂಬಲ ಇದೆ ಎಂದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…