Mysore
24
mist

Social Media

ಗುರುವಾರ, 12 ಡಿಸೆಂಬರ್ 2024
Light
Dark

ರಾಜಕುಮಾರ್ ಕನಸಿನಂತೆ ಖಂಡಿತಾ ಫಿಲ್ಮಿ ಸಿಟಿ ನಿರ್ಮಾಣ ಮಾಡುತ್ತೇವೆ : ಸಿಎಂ

ಬೆಂಗಳೂರು : ಕನ್ನಡದಲ್ಲಿ ಒಟಿಟಿ ವೇದಿಕೆ ತರಲು ಸಂಬಂಧಪಟ್ಟವರ ಜೊತೆ ಮಾತನಾಡುತ್ತೇನೆ ಜೊತೆಗೆ ರಾಜಕುಮಾರ್‌ ಕನಸಿನಂತೆ ಫಿಲ್ಮಿ ಸಿಟಿ ನಿರ್ಮಾಣ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡವನ್ನು ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನಡ ಚಿತ್ರರಂಗದ ಮೇಲೆ ನನಗೆ ಅಪಾರವಾದ ಗೌರವವಿದೆ. ದೆಹಲಿಗೆ ಹೋಗಿದ್ದ ಕಾರಣ ಕಾರ್ಯಕ್ರಮಕ್ಕೆ ಬರುವ ಸಾಧ್ಯತೆ ಕಡಿಮೆ ಇತ್ತು. ಆದರೆ ಮಿಸ ಮಾಡ್ದೆ ಬರಬೇಕು ಅಂತ ಬಂದಿದ್ದೇನೆ.ಕನ್ನಡ ಚಿತ್ರರಂಗ ಬೆಳವಣಿಗೆಗೆ ಎಷ್ಟು ಸಾಧ್ಯವೋ ಅಷ್ಟು ಸಹಕಾರ ನಮ್ಮಿಂದ ಸಿಗುತ್ತದೆ. ರಾಜಕುಮಾರ್‌ ಅವರ ಕನಸಿನಂತೆ ಖಂಡಿತಾ ಒಂದು ಫಿಲ್ಮಿ ಸಿಟಿ ನಿರ್ಮಾಣ ಮಾಡುತ್ತೇವೆ. ಕನ್ನಡ ಭಾಷೆಯ ಚಿತ್ರಗಳಿಗೆ ಸರ್ಕಾರ ಯಾವಾಗಲೂ ಬೆಂಬಲ ಸೂಚಿಸುತ್ತದೆ. ಫಿಲ್ಮಿ ಸಿಟಿಗೆ ಜಾಗ ಕೊಟ್ಟಿದ್ದೆ ನಮ್ಮ ಸರ್ಕಾರ. ನೂರು ಎಕರೆಗೂ ಹೆಚ್ಚು ಜಮೀನು ಕೊಟ್ಟಿದ್ದೇವೆ ಎಂದು ಹೇಳಿದರು.

Tags: