ಬೆಂಗಳೂರು : ಕನ್ನಡದಲ್ಲಿ ಒಟಿಟಿ ವೇದಿಕೆ ತರಲು ಸಂಬಂಧಪಟ್ಟವರ ಜೊತೆ ಮಾತನಾಡುತ್ತೇನೆ ಜೊತೆಗೆ ರಾಜಕುಮಾರ್ ಕನಸಿನಂತೆ ಫಿಲ್ಮಿ ಸಿಟಿ ನಿರ್ಮಾಣ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡವನ್ನು ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನಡ ಚಿತ್ರರಂಗದ ಮೇಲೆ ನನಗೆ ಅಪಾರವಾದ ಗೌರವವಿದೆ. ದೆಹಲಿಗೆ ಹೋಗಿದ್ದ ಕಾರಣ ಕಾರ್ಯಕ್ರಮಕ್ಕೆ ಬರುವ ಸಾಧ್ಯತೆ ಕಡಿಮೆ ಇತ್ತು. ಆದರೆ ಮಿಸ ಮಾಡ್ದೆ ಬರಬೇಕು ಅಂತ ಬಂದಿದ್ದೇನೆ.ಕನ್ನಡ ಚಿತ್ರರಂಗ ಬೆಳವಣಿಗೆಗೆ ಎಷ್ಟು ಸಾಧ್ಯವೋ ಅಷ್ಟು ಸಹಕಾರ ನಮ್ಮಿಂದ ಸಿಗುತ್ತದೆ. ರಾಜಕುಮಾರ್ ಅವರ ಕನಸಿನಂತೆ ಖಂಡಿತಾ ಒಂದು ಫಿಲ್ಮಿ ಸಿಟಿ ನಿರ್ಮಾಣ ಮಾಡುತ್ತೇವೆ. ಕನ್ನಡ ಭಾಷೆಯ ಚಿತ್ರಗಳಿಗೆ ಸರ್ಕಾರ ಯಾವಾಗಲೂ ಬೆಂಬಲ ಸೂಚಿಸುತ್ತದೆ. ಫಿಲ್ಮಿ ಸಿಟಿಗೆ ಜಾಗ ಕೊಟ್ಟಿದ್ದೆ ನಮ್ಮ ಸರ್ಕಾರ. ನೂರು ಎಕರೆಗೂ ಹೆಚ್ಚು ಜಮೀನು ಕೊಟ್ಟಿದ್ದೇವೆ ಎಂದು ಹೇಳಿದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…