ರಾಜ್ಯ

ನಟಿ ಲೀಲಾವತಿ ಅಂತಿಮ ದರ್ಶನ ಪಡೆದ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೆನ್ನೆ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದ ಕನ್ನಡ ಚಿತ್ರರಂಗದ ಖ್ಯಾತ ನಟಿ ಲೀಲಾವತಿಯವರ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿದ್ದಾರೆ.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ನಟಿ ಲೀಲಾವತಿಯವರ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯನವರು, ಲೀಲಾವತಿಯವರು ಯಾವುದೇ ಪಾತ್ರ ಕೊಟ್ಟರು ಅದಕ್ಕೆ ಜೀವ ತುಂಬುತ್ತಿದ್ದರು. ಬಹಳಾ ಮನೋಜ್ಞವಾಗಿ ನಟನೆ ಮಾಡುತ್ತಿದ್ದರು. ನಾನು ಅವರ ಅನೇಕ ಚಿತ್ರಗಳನ್ನು ನೋಡಿದ್ದೇನೆ. ನಮ್ಮ ಕಾಲದಲ್ಲಿ ವರನಟ ಡಾ. ರಾಜ್‌ಕುಮಾರ್‌ ಹಾಗೂ ಲೀಲಾವತಿಯವರ ಜೋಡಿ ಬಹಳಾ ಜನಪ್ರಿಯವಾಗಿತ್ತು. ನಾನು 60-70 ರ ದಶಕದಲ್ಲಿ ನಾನು ವಿಧ್ಯಾರ್ಥಿಯಾಗಿದ್ದಾಗ ಲೀಲಾವತಿಯವರ ಸಿನಿಮಾಗಳನ್ನು ನೋಡಿದ್ದೇನೆ.

ಆಕೆ ಒಬ್ಬ ಪರಿಪೂರ್ಣ ಕಲಾವಿದೆ. ಸಾಮಾಜಿಕ ಪಾತ್ರವಿರಲಿ, ಐತಿಹಾಸಿಕ ಪಾತ್ರವಿರಲಿ ಯಾವುದೇ ಪಾತ್ರ ಕೊಟ್ಟರು ಸಹ ಲೀಲಾಜಾಲವಾಗಿ ನಟನೆ ಮಾಡುತ್ತಿದ್ದರು. ಭಕ್ತ ಕುಂಬಾರ ಸಿನಿಮಾದಲ್ಲಿನ ಅವರ ಅಭಿನಯವನ್ನು ಮೆಚ್ಚಲೇ ಬೇಕು. ಅವರ ಸಾವು ನನಗೆ ದುಖಃ ತಂದಿದೆ ಅವರ ನಿಧನದ ಬಗ್ಗೆ ನನ್ನ ಸಂತಾಪಗಳು ಎಂದಿದ್ದಾರೆ.

ಕಳೆದ ವಾರ ಲೀಲಾವತಿಯವರ ಫಾರ್ಮ್‌ಹೌಸ್‌ ಗೆ ಹೋಗಿ ಆರೋಗ್ಯ ವಿಚಾರಿಸಿದ್ದೆ. ಆಗ ವಿನೋದ್‌ ರಾಜ್‌ ಕೂಡ ಇದ್ದರು. ತಾಯಿ ನಿನ್ನ ಮೇಲೆ ಬಹಳ ಪ್ರೀತಿ ಹೊಂದಿದ್ದರು. ನೀವಿಬ್ಬರೂ ಆದರ್ಶ ತಾಯಿ ಮಗ ಕೊನೆ ಘಳಿಗೆಯಲ್ಲಿ ಚೆನ್ನಾಗಿ ನೋಡಿಕೊಳ್ಳಪ್ಪ ಎಂದು ಹೇಳಿದ್ದೆ. ಏನೇ ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದೆ. ಆದರೆ ಅವರು ನನ್ನಿಂದ ಏನೂ ಸಹಾಯ ಕೇಳಲಿಲ್ಲ ಎಂದು ಹೇಳಿದರು.

lokesh

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

11 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

12 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

13 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago