ಬೆಂಗಳೂರು: ಸಿದ್ದರಾಮಯ್ಯ ನಂತರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ಹೇಳಿದ್ದಾರೆ.
ಶಾಸಕಾಂಗ ಪಕ್ಷದ ಸಭೆ ಹಿನ್ನೆಲೆಯಲ್ಲಿ ಪವರ್ ಶೇರಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಶಾಸಕರು, ಸಚಿವರು ಪವರ್ ಶೇರಿಂಗ್ ವಿಷಯದ ಬಗ್ಗೆ ಮಾತನಾಡುತ್ತಿಲ್ಲ. ನಿಮ್ಮ ಮಾಧ್ಯಮಗಳಲ್ಲಿ ಚರ್ಚೆ ಆಗ್ತಿದೆ. ಸಿದ್ದರಾಮಯ್ಯ ಅವರ ಅವಧಿ ಮುಗಿದ ಬಳಿಕ ಡಿ.ಕೆ.ಶಿವಕುಮಾರ್ ಅವರೇ ತಾನೇ ರಾಜ್ಯದ ಮುಖ್ಯಮಂತ್ರಿ. ಅವರನ್ನು ಬಿಟ್ಟರೆ ಸಿಎಂ ಅಭ್ಯರ್ಥಿ ಯಾರಿದ್ದಾರೆ ಹೇಳಿ ಎಂದು ಪ್ರಶ್ನಿಸಿದರು.
ಒಕ್ಕಲಿಗ ಸಂಘದವರು ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಮಾಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಜಾತಿ ಅಭಿಮಾನದಿಂದ ಅವರು ಆ ರೀತಿ ಹೇಳುತ್ತಿದ್ದಾರೆ. ಯಾರೇ ಹೇಳಿದ್ರೂ ಹೈಕಮಾಂಡ್ ನಾಯಕರ ತೀರ್ಮಾನವೇ ಅಂತಿಮ ತೀರ್ಮಾನ ಎಂದು ಹೇಳಿದರು.





