ರಾಜ್ಯ

ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರುತ್ತಾರೆ: ಯತೀಂದ್ರ ಸಿದ್ದರಾಮಯ್ಯ

ಹಾಸನ: ಮುಂಬರುವ ಲೋಕಸಭಾ ಚುನಾವಣೆ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಆಗಲಿದ್ದು, ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂಬ ವದಂತಿಗಳಿಗೆ, ಇವೆಲ್ಲಾ ಉಹಾಪೋಗಳು, ಆ ರೀತಿ ಏನು ಇಲ್ಲ. ಸಿಎಂ ಸಿದ್ದರಾಮಯ್ಯ ಅವರು ಪೂರ್ಣಾವಧಿಗೆ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಜಿಲ್ಲೆಯೆ ಹೊಳೆ ನರಸೀಪುರ ತಾಲೂಕಿನ ಹಳ್ಳಿಮೈಸೂರಿನಲ್ಲಿ ಅವರು ಮಾತನಾಡಿ, ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿರುತ್ತಾರೆ ಎನ್ನುವುದು ನನ್ನ ನಂಬಿಕೆ ಎಂದು ಯತೀಂದ್ರ ತಿಳಿಸಿದರು.

ಇನ್ನು ಡಿಕೆ ಶಿವಕುಮಾರ್‌ ಅವರು ಸಿಎಂ ಆಗತ್ತಾರೆ ಎಂಬ ಪ್ರಶ್ನೆಗೆ, ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೂ ಹಲವಾರು ಜನ ಸಿಎಂ ಆಕಾಂಕ್ಷಿಗಳಿದ್ದರು, ನಮ್ಮ ಸರ್ಕಾರ ಮಾತ್ರವಲ್ಲ ಎಲ್ಲ ಸರ್ಕಾರ ಅಧಿಕಾರದಲ್ಲಿದ್ದಾಗಲೂ ಈ ರೀತಿ ನಡೆಯುತ್ತದೆ. ಆದರೆ ರಾಜ್ಯಕ್ಕೆ ಒಂದು ಸ್ಥಿರ ಸರ್ಕಾರ ಕೊಡಬೇಕಿರುವುದು ಪಕ್ಷದ ಕರ್ತವ್ಯ ಆಗಿರುತ್ತದೆ. ಆ ನಿಟ್ಟಿನಲ್ಲಿ ಸಿದ್ದರಾಮಯ್ಯ ಸಿಎಂ ಆಗಿ ಐದು ವರ್ಷ ಅವಧಿ ಪೂರೈಸುತ್ತಾರೆ ಎಂಬುದು ನನ್ನ ನಂಬಿಕೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

andolana

Recent Posts

ಮಂಡ್ಯ ಸಮ್ಮೇಳನ | ನಗರ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…

3 mins ago

ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 34 ಲಕ್ಷ ರೂ. ವಂಚನೆ..!

ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…

30 mins ago

ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಜ.15ಕ್ಕೆ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜನವರಿ…

49 mins ago

ಸಮ್ಮೇಳನಕ್ಕೆ ಕ್ಷಣಗಣನೆ | ಸಮ್ಮೇಳನ ಸರ್ವಾಧ್ಯಕ್ಷ ಗೊ.ರು ಚನ್ನಬಸಪ್ಪಗೆ ಆತ್ಮೀಯ ಸ್ವಾಗತ

ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…

59 mins ago

BJP ಎಂಎಲ್‌ಸಿ ಸಿ.ಟಿ ರವಿ ಬಂಧನ

ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್‌ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…

1 hour ago

ಸಿ. ಟಿ ರವಿ ಅವಾಚ್ಯ ಪದ ಬಳಕೆ ; ಸಭಾಪತಿ ಹಾಗೂ ಪೊಲೀಸರಿಗೆ ಸಚಿವೆ ದೂರು ನೀಡಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…

1 hour ago