ಬೆಂಗಳೂರು: ದೇವರಾಜ ಅರಸು ಅವರು ಏಳು ವರ್ಷಗಳ ಕಾಲ ಸಿಎಂ ಆಗಿದ್ದರು. ಸಿದ್ದರಾಮಯ್ಯನವರು ಪೂರ್ಣಾವಧಿ ಇರುತ್ತಾರೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ರಾಜ್ಯದಲ್ಲಿ ಮತ್ತೆ ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗು ಕೇಳಿಬರುತ್ತಿದ್ದು, ಕಾಂಗ್ರೆಸ್ ಸಚಿವರೇ ಬದಲಾವಣೆ ಬಗ್ಗೆ ತೆರೆಮರೆಯಲ್ಲಿ ಆಟ ಆಡುತ್ತಿದ್ದಾರೆ ಎನ್ನಲಾಗುತ್ತಿದೆ.
ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ನಿನ್ನೆಯಷ್ಟೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸುಳಿವು ನೀಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಬದಲಾವಣೆಯ ಗಾಳಿ ಬೀಸಿದ್ದು, ಈ ಬೆನ್ನಲ್ಲೇ ಸಿಎಂ ಬದಲಾವಣೆಯ ಕೂಗು ಕೇಳಿಬರುತ್ತಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು, ಏಳು ವರ್ಷಗಳಲ್ಲ ಸಿದ್ದರಾಮಯ್ಯ ಹತ್ತು ವರ್ಷ ಸಿಎಂ ಆಗಿ ಇರುತ್ತಾರೆ. ಹೈಕಮಾಂಡ್ ಸಿದ್ದರಾಮಯ್ಯ ಅವರನನು ಸಿಎಂ ಮಾಡಿದೆ. ಪೂರ್ಣಾವಧಿ ಸಿಎಂ ಆಗಿ ಸಿದ್ದರಾಮಯ್ಯ ಇರುತ್ತಾರೆ. ಈಗ ಸಿಎಂ ಕುರ್ಚಿ ಖಾಲಿ ಇಲ್ಲ ಎಂದರು.
ಈ ಅವಧಿ ಪೂರೈಸಿ ಮತ್ತೆ ಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ. ಮುಂದಿನ ಬಾರಿಯು ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…
ಕೊಳ್ಳೇಗಾಲ: ಅಕ್ರಮವಾಗಿ ಕೇರಳ ಲಾಟರಿಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಗರ ಮಾಂಬಳ್ಳಿ ಠಾಣೆಯ ಪೊಲೀಸರು ಬಂಧಿಸಿರುವ ಘಟನೆ ಮಂಗಳವಾರ ಜರುಗಿದೆ.…
ಕೆ.ಬಿ.ರಮೇಶನಾಯಕ ರಾಯಚೂರು, ಮಸ್ಕಿ ತಂಡಗಳಿಗೆ ತರಬೇತಿ; ಸ್ವಚ್ಛ ಶೆಹರ್ ಯೋಜನೆಯಡಿ ಒಡಂಬಡಿಕೆ ಮೈಸೂರು: ಸ್ವಚ್ಛತೆಯಲ್ಲಿ ಹಲವು ಬಾರಿ ದೇಶದ ಗಮನ…
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…