ರಾಜ್ಯ

ಸಿದ್ದರಾಮಯ್ಯ ಸಿಎಂ ಹುದ್ದೆ ಬಿಟ್ಟುಕೊಡೋದು ಖಚಿತ: ಕೇಂದ್ರ ಸಚಿವ ವಿ.ಸೋಮಣ್ಣ

ನವದೆಹಲಿ: ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಸಿಎಂ ಹುದ್ದೆ ಬಿಟ್ಟು ಕೊಡುತ್ತಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಈ ಕುರಿತು ನವದೆಹಲಿಯಲ್ಲಿ ಇಂದು ಮಾತನಾಡಿದ ಅವರು, ಈ ಬಾರಿ ಅತೀ ಹೆಚ್ಚು ಮಳೆಯಾಗಿರುವುದರಿಂದ ಜನತೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಸ್ತೆಗಳೆಲ್ಲಾ ಹಾಳಾಗಿರುವುದರಿಂದ ಜನರು ಸರಿಯಾಗಿ ಸಂಚಾರ ಮಾಡದೇ ಪರದಾಟ ನಡೆಸುತ್ತಿದ್ದಾರೆ. ಮೊದಲು ಇಂತಹ ವಿಷಯಗಳ ಬಗ್ಗೆ ಗಮನಹರಿಸಬೇಕು. ಇದನ್ನು ಬಿಟ್ಟು ಸಿಎಂ ಬದಲಾವಣೆ ಬಗ್ಗೆ ಪದೇ ಪದೇ ಹೇಳಿಕೆ ಕೊಡುವುದು ಸರಿಯಲ್ಲ ಎಂದು ಕಿಡಿಕಾರಿದರು.

ಇದನ್ನು ಓದಿ: ಡಿಕೆಶಿಗೆ ಸಿಎಂ ಹುದ್ದೆ ಹಂಬಲ; ಅದಕ್ಕಿಲ್ಲ ಸಮರ್ಪಕ ಬಲ

ಇನ್ನು ಮುಂದುವರಿದು ಮಾತನಾಡಿದ ಅವರು, ನಮಗಿರುವ ಮಾಹಿತಿ ಪ್ರಕಾರ ಸಿದ್ದರಾಮಯ್ಯನವರು ಡಿ.ಕೆ.ಶಿವಕುಮಾರ್‌ ಅವರಿಗೆ ಸಿಎಂ ಹುದ್ದೆ ಬಿಟ್ಟುಕೊಡುತ್ತಾರೆ. ಈ ಬಗ್ಗೆ ಜನರು ಕೂಡ ಮಾತನಾಡುತ್ತಿದ್ದಾರೆ. ಈ ಮಧ್ಯೆ ಹುಸಿಬಾಂಬ್‌ಗಳನ್ನು ಹಾಕಿಕೊಂಡು ರಾಜ್ಯದ ಜನತೆಯನ್ನು ಕತ್ತಲೆ ಕೋಣೆಯಲ್ಲಿ ಇರಿಸುವ ಕೆಲಸ ಬಿಟ್ಟುಬಿಡಿ ಎಂದು ಹರಿಹಾಯ್ದರು.

ಆಂದೋಲನ ಡೆಸ್ಕ್

Recent Posts

ಹೊಸ ದಾಖಲೆ ನಿರ್ಮಿಸಿದ ಬೆಂಗಳೂರು ಪೊಲೀಸರು: ಏನದು ಗೊತ್ತಾ?

ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…

22 seconds ago

ನಮ್ಮ ಸರ್ಕಾರ ರೈತರ ಪರ ಸರ್ಕಾರ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಸಿಎಂ ಸಿದ್ದರಾಮಯ್ಯ ರೈತರ ಬಗ್ಗೆ ಹಾಗೂ ಸಾಮಾನ್ಯರ ಬಗ್ಗೆ ಅತೀ ಹೆಚ್ಚಿನ ಕಾಳಜಿ ಇಟ್ಟುಕೊಂಡಿದ್ದಾರೆ ಎಂದು ಕೃಷಿ ಹಾಗೂ…

13 mins ago

ಮಂಡ್ಯದಲ್ಲಿ ಕೃಷಿ ಮೇಳ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕೃಷಿ…

28 mins ago

ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ: ಆರ್.‌ಅಶೋಕ್‌

ಬೆಂಗಳೂರು: ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದ ವೇಳೆ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ…

60 mins ago

ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…

2 hours ago

ಮಂಡ್ಯ| ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿರಾಳ

ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…

2 hours ago