ರಾಜ್ಯ

ಸಿದ್ದರಾಮಯ್ಯ ಹೆಚ್ಚು ದಿನ ಸಿಎಂ ಆಗಿ ಮುಂದುವರಿಯಲ್ಲ: ಬಿ.ವೈ.ವಿಜಯೇಂದ್ರ ಭವಿಷ್ಯ

ಶಿವಮೊಗ್ಗ: ಬಜೆಟ್‌ ನಂತರ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುತ್ತಾರೆ. ವಿರೋಧಿ ಬಣದಿಂದ ಆಕ್ಷೇಪವಿರುವ ಕಾರಣ ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್‌ ಫ್ಯಾಮಿಲಿಯೊಂದಿಗೆ ವಿದೇಶ ಪ್ರವಾಸದಲ್ಲಿರುವಾಗಲೇ ಇತ್ತ ಸಿಎಂ ಸಿದ್ದರಾಮಯ್ಯ ಅವರು ಆಪ್ತ ಸಚಿವರೊಂದಿಗೆ ಬೆಳಗಾವಿಯಲ್ಲಿ ಡಿನ್ನರ್‌ ಮೀಟಿಂಗ್‌ ನಡೆಸಿದ್ದರು.

ಈ ಬಗ್ಗೆ ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಸಿಎಂ ಸ್ಥಾನವನ್ನು ಬಿಟ್ಟುಕೊಡಲು ಸಿದ್ದರಿರದ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ.ಶಿವಕುಮಾರ್‌ ಅನುಪಸ್ಥಿತಿಯಲ್ಲಿ ಸಭೆ ನಡೆಸಿದ್ದಾರೆ. ಇದರಿಂದ ಕಾಂಗ್ರೆಸ್‌ ಪಕ್ಷದಲ್ಲಿ ಒಳಜಗಳವಿದೆ ಎಂಬುದು ನೇರವಾಗಿ ಕಾಣಿಸುತ್ತಿದೆ ಎಂದರು.

ಇನ್ನು ಗುತ್ತಿಗೆದಾರ ಸಚಿನ್‌ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್‌ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಕಲಬುರ್ಗಿಯಲ್ಲಿ ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ಪ್ರತಿಭಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗೈರಾಗಿದ್ದರು.

ಈ ಬಗ್ಗೆ ಸ್ಪಷ್ಟನೆ ನೀಡಿದ ವಿಜಯೇಂದ್ರ ಅವರು, ನಾನು ಶಿಕಾರಿಪುರದಲ್ಲಿ ಇರುವುದರಿಂದ ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಲಿಲ್ಲ. ಸಚಿನ್‌ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿರುವುದರಿಂದ ಯಾರಿಗೂ ನ್ಯಾಯ ಸಿಗಲ್ಲ. ಆದ್ದರಿಂದ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿದರೆ ಮಾತ್ರ ಎಲ್ಲಾ ಸತ್ಯಾ ಸತ್ಯತೆ ಹೊರ ಬರಲಿದೆ ಎಂದು ಆಗ್ರಹಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಲೆ ಪ್ರಕರಣ : ಎಸ್‌.ಪಿ.ಮಲ್ಲಿಕಾರ್ಜುನ ಹೇಳಿದ್ದೇನು?

ಮೈಸೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ…

10 mins ago

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

ರೋಮ್‌ : ಇಟಲಿಯ ಬರ್ಗಾಮೊ ಪ್ರಾಂತ್ಯದ ಕೊವೊದಲ್ಲಿ ಇಬ್ಬರು ಭಾರತೀಯರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕೊವೊ ನಿವಾಸಿ ರಾಗಿಂದರ್ ಸಿಂಗ್…

26 mins ago

ಮೈಸೂರು | ಪಬ್‌ನಲ್ಲಿ ಗಲಾಟೆ ; ಓರ್ವ ಯುವಕನ ಕೊಲೆ

ಮೈಸೂರು : ಪಬ್‌ನಲ್ಲಿ ನಡೆದ ಗಲಾಟೆ ಪರಿಣಾಮ ಓರ್ವ ಯುವಕ ಕೊಲೆಯಾಗಿರುವ ಘಟನೆ ಮೈಸೂರಿನ ವಿಜಯನಗರದ ಎರಡನೇ ಹಂತದ ರೆಸ್ಟೋರೆಂಟ್‌ನಲ್ಲಿ…

41 mins ago

ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಹಾವೇರಿ: ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು…

58 mins ago

ನೋಯ್ಡಾ ಹಿಂಸಾತ್ಮಕ ಪ್ರತಿಭಟನೆ ಹಿಂದಿನ ಮಾಸ್ಟರ್‌ಮೈಂಡ್‌ ತಮಿಳುನಾಡಿನಲ್ಲಿ ಅರೆಸ್ಟ್‌

ಚೆನ್ನೈ: ನೋಯ್ಡಾದಲ್ಲಿ ನಡೆದ ಕಾರ್ಮಿಕರ ಪ್ರತಿಭಟನೆ ಹಿಂದಿನ ಮಾಸ್ಟರ್‌ ಮೈಂಡ್‌ನನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ. ಹಿಂಸಾತ್ಮಕ ಕಾರ್ಮಿಕರ ಪ್ರತಿಭಟನೆಯಲ್ಲಿ ಪ್ರಮುಖ ಆರೋಪಿಗಳನ್ನು…

1 hour ago

ಕೇದಾರನಾಥ ಧಾಮದಲ್ಲಿ ಯಾತ್ರಾರ್ಥಿಗಳಿಗೆ 24 ಗಂಟೆ ಬಿಸಿನೀರು: ಸಿಎಂ ಪುಷ್ಕರ್‌ ಸಿಂಗ್‌ ಧಾಮಿ ಘೋಷಣೆ

ಡೆಹರಾಡೂನ್:‌ ಕೇದಾರನಾಥ ಧಾಮಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಶೀಘ್ರದಲ್ಲೇ ತಣ್ಣೀರಿನ ಬದಲಿಗೆ 24 ಗಂಟೆಗಳ ಬಿಸಿನೀರಿನ ಪೂರೈಕೆಯನ್ನು ಒದಗಿಸಲಾಗುವುದು ಎಂದು…

3 hours ago