ಬೆಳಗಾವಿ: ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.
ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯದ ಎಲ್ಲಾ ಶಾಸಕರು ಸಿದ್ದರಾಮಯ್ಯ ಪರ ಇದ್ದೇವೆ. ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದರು.
ಸದ್ಯಕ್ಕೆ ಹೈಕೋರ್ಟ್ ತನಿಖೆಗೆ ಆದೇಶ ನೀಡಿದೆ ಅಷ್ಟೆ. ಮುಡಾ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯಾಗಲಿ. ತಪ್ಪು ಕಂಡು ಬಂದರೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಹೇಳಿದರು.
ಮುಡಾ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯಾಗುವವರೆಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ. ಎಲ್ಲಾ ಶಾಸಕರದ್ದು, ಹೈಕಮಾಂಡ್‌ನದ್ದು ಕೂಡ ಇದೇ ಆಗ್ರಹವಾಗಿದೆ ಎಂದು ಮಾಹಿತಿ ನೀಡಿದರು.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…