ಮೈಸೂರು: ಮುಡಾ ಹಗರಣದ ಮೂಲಕ ಸರ್ಕಾರ ಬೀಳಿಸಲು ವಿಪಕ್ಷಗಳು ಯತ್ನಿಸುತ್ತಿವೆ. ಆದರೆ, ಸರ್ಕಾರ ಯಾವುದೇ ಕಾರಣಕ್ಕೂ ಬೀಳುವುದಿಲ್ಲ. ಸಿಎಂ ಸಿದ್ದರಾಮಯ್ಯ ಅವರ ತಲೆದಂಡ ಶುದ್ಧ ಸುಳ್ಳು. ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪ ಅಮರ್‌ನಾಥ್ ತಿಳಿಸಿದರು.
ಪತ್ರಕರ್ತರ ಭವನದಲ್ಲಿಂದು (ಆ.26) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆಯಾಗಲ್ಲ. ದೆಹಲಿಗೆ ಹೋದವರೆಲ್ಲಾ ಲಾಭಿ ಮಾಡುತ್ತಾರೆ ಎಂಬುದೆಲ್ಲಾ ಸುಳ್ಳು. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅವರ ನಾಯಕತ್ವ ಬದಲಾಗಲ್ಲ. ಈ ರೀತಿಯ ಚರ್ಚೆ ಮಾಡಿರುವುದು ವಿರೋಧ ಪಕ್ಷಗಳು ಮಾತ್ರ ಎಂದು ಟಾಂಗ್ ಕೊಟ್ಟರು.
ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ರಾಷ್ಟ್ರೀಯ ನಾಯಕರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಎಲ್ಲರೂ ಸಿಎಂ ಪರ ನಿಂತಿದ್ದಾರೆ. ರಾಜ್ಯಪಾಲರು ಬಿಜೆಪಿಯ ಕೈಗೊಂಬೆಯಾಗಿ ತರಾತುರಿಯಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಪ್ರಕರಣದಲ್ಲಿ ಅನುಮತಿ ನೀಡದೆ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ. ವಿರೋಧ ಪಕ್ಷಗಳು ಸರ್ಕಾರ ಅಲುಗಾಡಿಸಲು ಷಡ್ಯಂತ್ರ ರೂಪಿಸಿದ್ದು, ಯಾವುದೇ ಕಾರಣಕ್ಕೂ ಸರ್ಕಾರ ಬೀಳುವುದಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
ದೇಶದಲ್ಲಿ ಹೆಣ್ಣು ಎಷ್ಟು ಸುರಕ್ಷಿತ ಎಂಬ ಆತಂಕ ಎದುರಾಗಿದೆ. ದಿನನಿತ್ಯ ಒಂದಲ್ಲಾ ಒಂದು ಘಟನೆಗಳು ನಡೆಯುತ್ತಿವೆ. ಸಮಾಜ ಸರ್ಕಾರಗಳೊಂದಿಗೆ ಕೈ ಜೋಡಿಸಿ ಕೆಲಸ ಮಾಡಬೇಕಿದೆ. ಪೋಷಕರ ಸ್ಥಾನದಲ್ಲಿ ನಿಂತು ಜವಾಬ್ದಾರಿ ತೆಗೆದುಕೊಳ್ಳಬೇಕು. ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಲು ಕಾನೂನುಗಳು ಗಟ್ಟಿಯಾಗಬೇಕು. ಅಪರಾಧಿಗಳನ್ನು ಸದೆ ಬಡಿಯಲು ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದರು.
ಸಮಾಜದಲ್ಲಿ ತಾರತಮ್ಯ ತೊಲಗಿಸಿದಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ. ಮೋದಿ ಸರ್ಕಾರ ತರಾತುರಿಯಲ್ಲಿ ಮಹಿಳಾ ಮೀಸಲಾತಿ ಜಾರಿಗೊಳಿಸಿದೆ. ಆದರೆ ಅದು ಜಾರಿಯಾಗಿಲ್ಲ. ಶೀಘ್ರವಾಗಿ ಮೀಸಲು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಗ್ಯಾರೆಂಟಿ ಯೋಜನೆ ಜಿಲ್ಲಾಧ್ಯಕ್ಷ ಅರುಣ್ ಕುಮಾರ್, ಗ್ಯಾರಂಟಿ ಯೋಜನೆ ನಂಜನಗೂಡು ತಾಲ್ಲೂಕು ಅಧ್ಯಕ್ಷ ಮಾರುತಿ, ಮೈಸೂರು ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಪುಷ್ಪಲತಾ ಚಿಕ್ಕಣ್ಣ, ರಾಜ್ಯ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷ ಪುಷ್ಪವಲ್ಲಿ ಪತ್ರಿಕಾಗೋಷ್ಠಿಯಲ್ಲಿದ್ದರು.
ಕೊಡಗಿನಲ್ಲಿ ಕಾಡುಪಾಲಾಗಿದ್ದ ಕೇರಳದ ಶರಣ್ಯ ಅನುಭವ ಕಥನ ನಾನು ಶರಣ್ಯ. ಕೇರಳದ ಕೋಝಿಕೋಡ್ ಜಿಲ್ಲೆಯ ನಾದಾಪುರಂನ ಯುವತಿ. ಕೊಚ್ಚಿಯಲ್ಲಿ ಐಟಿ…
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…