ರಾಜ್ಯ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಪುಷ್ಪ ಅಮರನಾಥ್‌

ಮೈಸೂರು: ಮುಡಾ ಹಗರಣದ ಮೂಲಕ ಸರ್ಕಾರ ಬೀಳಿಸಲು ವಿಪಕ್ಷಗಳು ಯತ್ನಿಸುತ್ತಿವೆ. ಆದರೆ, ಸರ್ಕಾರ ಯಾವುದೇ ಕಾರಣಕ್ಕೂ ಬೀಳುವುದಿಲ್ಲ. ಸಿಎಂ ಸಿದ್ದರಾಮಯ್ಯ ಅವರ ತಲೆದಂಡ ಶುದ್ಧ ಸುಳ್ಳು. ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪ ಅಮರ್‌ನಾಥ್ ತಿಳಿಸಿದರು.

ಪತ್ರಕರ್ತರ ಭವನದಲ್ಲಿಂದು (ಆ.26) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆಯಾಗಲ್ಲ. ದೆಹಲಿಗೆ ಹೋದವರೆಲ್ಲಾ ಲಾಭಿ ಮಾಡುತ್ತಾರೆ ಎಂಬುದೆಲ್ಲಾ ಸುಳ್ಳು. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅವರ ನಾಯಕತ್ವ ಬದಲಾಗಲ್ಲ. ಈ ರೀತಿಯ ಚರ್ಚೆ ಮಾಡಿರುವುದು ವಿರೋಧ ಪಕ್ಷಗಳು ಮಾತ್ರ ಎಂದು ಟಾಂಗ್‌ ಕೊಟ್ಟರು.

ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ರಾಷ್ಟ್ರೀಯ ನಾಯಕರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಎಲ್ಲರೂ ಸಿಎಂ ಪರ ನಿಂತಿದ್ದಾರೆ. ರಾಜ್ಯಪಾಲರು ಬಿಜೆಪಿಯ ಕೈಗೊಂಬೆಯಾಗಿ ತರಾತುರಿಯಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಪ್ರಕರಣದಲ್ಲಿ ಅನುಮತಿ ನೀಡದೆ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ. ವಿರೋಧ ಪಕ್ಷಗಳು ಸರ್ಕಾರ ಅಲುಗಾಡಿಸಲು ಷಡ್ಯಂತ್ರ ರೂಪಿಸಿದ್ದು, ಯಾವುದೇ ಕಾರಣಕ್ಕೂ ಸರ್ಕಾರ ಬೀಳುವುದಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ದೇಶದಲ್ಲಿ ಹೆಣ್ಣು ಎಷ್ಟು ಸುರಕ್ಷಿತ ಎಂಬ ಆತಂಕ ಎದುರಾಗಿದೆ. ದಿನನಿತ್ಯ ಒಂದಲ್ಲಾ ಒಂದು ಘಟನೆಗಳು ನಡೆಯುತ್ತಿವೆ. ಸಮಾಜ ಸರ್ಕಾರಗಳೊಂದಿಗೆ ಕೈ ಜೋಡಿಸಿ ಕೆಲಸ ಮಾಡಬೇಕಿದೆ. ಪೋಷಕರ ಸ್ಥಾನದಲ್ಲಿ ನಿಂತು ಜವಾಬ್ದಾರಿ ತೆಗೆದುಕೊಳ್ಳಬೇಕು. ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಲು ಕಾನೂನುಗಳು ಗಟ್ಟಿಯಾಗಬೇಕು. ಅಪರಾಧಿಗಳನ್ನು ಸದೆ ಬಡಿಯಲು ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದರು.

ಸಮಾಜದಲ್ಲಿ ತಾರತಮ್ಯ ತೊಲಗಿಸಿದಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ. ಮೋದಿ ಸರ್ಕಾರ ತರಾತುರಿಯಲ್ಲಿ ಮಹಿಳಾ ಮೀಸಲಾತಿ ಜಾರಿಗೊಳಿಸಿದೆ. ಆದರೆ ಅದು ಜಾರಿಯಾಗಿಲ್ಲ. ಶೀಘ್ರವಾಗಿ ಮೀಸಲು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಗ್ಯಾರೆಂಟಿ ಯೋಜನೆ ಜಿಲ್ಲಾಧ್ಯಕ್ಷ ಅರುಣ್ ಕುಮಾರ್, ಗ್ಯಾರಂಟಿ ಯೋಜನೆ ನಂಜನಗೂಡು ತಾಲ್ಲೂಕು ಅಧ್ಯಕ್ಷ ಮಾರುತಿ, ಮೈಸೂರು ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಪುಷ್ಪಲತಾ ಚಿಕ್ಕಣ್ಣ, ರಾಜ್ಯ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷ ಪುಷ್ಪವಲ್ಲಿ ಪತ್ರಿಕಾಗೋಷ್ಠಿಯಲ್ಲಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

3 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

3 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

3 hours ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

3 hours ago

ಮತದಾನದ ಹಕ್ಕು ಕಸಿಯಲು ನಮೂನೆ ೭ ದುರ್ಬಳಕೆ ಆರೋಪ!

ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …

4 hours ago

ಮಳೆ ಬಂದರೆ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಫಜೀತಿ!

ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ  ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…

4 hours ago