ಶಿವಮೊಗ್ಗ: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡಬೇಕು. ಹೆಚ್ಚಿನ ಪರಿಹಾರ ಕೊಡಲು ಸಾಧ್ಯವಾಗದಿದ್ದರೆ ರಾಜೀನಾಮೆ ಕೊಟ್ಟು ಹೋಗಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.
ಇದನ್ನು ಓದಿ ; ಭಾರತ-ಪಾಕಿಸ್ತಾನ ಕ್ರಿಕೆಟ್ ರದ್ದು ಮಾಡಬೇಕಿತ್ತು: ಸಂಸದ ಬಸವರಾಜ ಬೊಮ್ಮಾಯಿ
ಈ ಕುರಿತು ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದೂ ವಿರೋಧಿ ಸರ್ಕಾರ ಆಡಳಿತ ನಡೆಸುತ್ತಿದೆ. ಸರ್ಕಾರ ಒಂದು ಸಮುದಾಯದ ಓಲೈಕೆಗೆ ಮುಂದಾಗಿದೆ. ಈ ಸರ್ಕಾರಕ್ಕೆ ಅಲ್ಪಸಂಖ್ಯಾತರ ನೋವು ಕಾಣುತ್ತಿದೆ. ಬೇರೆ ಸಮುದಾಯದ ನೋವುಗಳು ಕಾಣಿಸುತ್ತಿಲ್ಲ. ಕೇರಳದ ಆನೆಯಿಂದ ಸಾವನ್ನಪ್ಪಿದವರಿಗೆ ಪರಿಹಾರ ನೀಡುತ್ತಾರೆ. ಆರ್‌ಸಿಬಿ ವಿಜಯೋತ್ಸವದಲ್ಲಿ ಸತ್ತವರಿಗೆ ಹೆಚ್ಚಿನ ಪರಿಹಾರ ನೀಡುತ್ತಾರೆ. ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಮೃತಪಟ್ಟವರಿಗೆ ಯಾಕೆ ಹೆಚ್ಚಿನ ಪರಿಹಾರ ಇಲ್ಲ ಎಂದು ಅಸಮಾಧಾನ ಹೊರಹಾಕಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಮದ್ದೂರಿನಲ್ಲಿ ಅನಧಿಕೃತ ಮಸೀದಿ ನಿರ್ಮಾಣ ಮಾಡಲಾಗಿದೆ. ಆದರೂ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ರಾಜ್ಯದಲ್ಲಿ ಇಂತಹ ಘಟನೆಗಳು ನಡೆಯುತ್ತಿವೆ ಅಂದರೆ ಅದಕ್ಕೆ ಸಿಎಂ ಸಿದ್ದರಾಮಯ್ಯ ಅಹಂಕಾರವೇ ಕಾರಣ ಎಂದು ವಾಗ್ದಾಳಿ ನಡೆಸಿದರು.
ಕೇಪ್ ಕೆನವೆರೆಲ್: ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 9 ತಿಂಗಳ ಕಾಲ ಸುದೀರ್ಘ ಕಾಲದ ಅನುಭವ ಹೊಂದಿರುವ ಸುನಿತಾ ವಿಲಿಯಮ್ಸ್ ನಿವೃತ್ತರಾಗಿದ್ದಾರೆ.…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ರಾಮನಗರ: ತೆಂಗಿನ ಮರ ಹತ್ತಿ ಕೆಳಗೆ ಬಿದ್ದ ಸ್ನೇಹಿತನನ್ನು ಕೆರೆಯಲ್ಲಿ ಮುಳುಗಿಸಿ ಹತ್ಯೆ ಮಾಡಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ…
ಮಹಾದೇಶ್ ಎಂ ಗೌಡ ಹನೂರು: ಮಳೆಯನ್ನೇ ಆಶ್ರಯಿಸಿ ಬೆಳೆಯಬೇಕಿದ್ದ ಸ್ಥಿತಿ, ಕುಸಿಯುತ್ತಿರುವ ಅಂತರ್ಜಲದಿಂದ ಪಡಿಪಟಾಲು ಪಡುತ್ತಿದ್ದ ರೈತರ ಕಷ್ಟ ಕೊನೆಗೂ…
ಪಂಜು ಗಂಗೊಳ್ಳಿ ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…
ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…