ಬೆಂಗಳೂರು: ಇತ್ತೀಚೆಗೆ ನಡೆಯುತ್ತಿರುವ ಹಲವು ಕಾರ್ಯಕ್ರಮಗಳಲ್ಲಿ ತಾತನ ಜೊತೆ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವ ಸಿದ್ದರಾಮಯ್ಯ ಮೊಮ್ಮಗ ಧವನ್ ರಾಕೇಶ್ ರಾಜಕೀಯ ಪ್ರವೇಶಕ್ಕೆ ಸಿದ್ಧತೆ ನಡೆಸಿದ್ದಾರೆ.
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಜೊತೆ ತೆಗೆಸಿಕೊಂಡಿರುವ ಫೋಟೋಗಳನ್ನು ಸಿದ್ದರಾಮಯ್ಯ ಮೊಮ್ಮಗ ತನ್ನ ಇನ್ಸ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ರಾಜಕೀಯದ ಬಗೆಗಿನ ತಮ್ಮ ಒಲವನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಕಳೆದ ಆಗಸ್ಟ್.8ರಂದು, ನಮ್ಮ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗುವ ಸದಾವಕಾಶ ನನಗೆ ದೊರೆಯಿತು. ಪ್ರಾಮಾಣಿಕ ನಾಯಕರನ್ನು ನಾನು ಎಷ್ಟರ ಮಟ್ಟಿಗೆ ಗೌರವಿಸುತ್ತೇನೆ ಮತ್ತು ಅವರನ್ನು ಭೇಟಿಯಾಗಲು ಬಯಸುತ್ತೇನೆ ಎಂಬುದನ್ನು ನನ್ನ ತಾತ ಗುರುತಿಸಿದ್ದರಿಂದ ಇದು ಸಾಧ್ಯವಾಯಿತು. ಈ ರಾಜಕೀಯ ವಲಯದಲ್ಲಿ ಪ್ರಾಮಾಣಿಕತೆಯನ್ನು ಬಹುತೇಕವಾಗಿ ಕಡೆಗಣಿಸಲಾಗಿದೆ. ಆದರೆ, ಇದೇ ವಲಯದಲ್ಲಿ ಪ್ರಾಮಾಣಿಕವಾಗಿರಲು ಯತ್ನಿಸುವ, ತನ್ನ ನಂಬಿಕೆಗೆ ಬದ್ಧವಾಗಿರುವ ನಾಯಕರನ್ನು ಭೇಟಿಯಾಗಲು ನಾನು ಇಚ್ಛಿಸುತ್ತೇನೆ.
ಇದನ್ನು ಓದಿ: ಮೈಸೂರಲ್ಲಿ ಸರಣಿ ಕೊಲೆ : ನಾಳೆ ಅಧಿಕಾರಿಗಳ ಸಭೆ ಕರೆದ ಸಿಎಂ
ರಾಜಕಾರಣವು ನನ್ನ ಬದುಕಿನ ಹಿನ್ನೆಲೆಯ ಒಂದು ಭಾಗವಾಗಿರುವುದು ನಿಜ. ಆದರೆ, ನಿರಂತರ ವಿರೋಧದ ನಡುವೆಯೂ ತನ್ನ ನಂಬಿಕೆ ಹಾಗೂ ಸಿದ್ಧಾಂತದ ಪರ ನಿಲ್ಲಲು ರಾಹುಲ್ ಗಾಂಧಿ ನಿರ್ಧರಿಸಿದರು. ಇಂತಹ ನಾಯಕನನ್ನು ಭೇಟಿಯಾಗಿದ್ದು ನಿಜವಾಗಿಯೂ ವಿಭಿನ್ನ ಅನುಭವವಾಗಿತ್ತು. ಅವರೊಂದಿನ ಸ್ವಲ್ಪ ಕ್ಷಣಗಳ ಕಾಲ ಮಾತನಾಡಿದೆ. ಅವರ ಕುರಿತು ನನ್ನಲ್ಲಿರುವ ಅಪಾರ ಗೌರವದ ಬಗ್ಗೆ ತಿಳಿಸಿದೆ. ಈಗ ವಿದ್ಯಾರ್ಥಿಯಾಗಿ, ಮುಂದೆ ವಕೀಲನಾಗಿ ನಾನು ಅವರ ಜೊತೆ ನಿಲ್ಲಲು, ಅವರೊಂದಿಗೆ ಹೆಜ್ಜೆ ಹಾಕಲು ಬಯಸುತ್ತೇನೆಂದು ಹೇಳಿದೆ.
ಈಗ ನಾವೆಲ್ಲರೂ ಸ್ವಲ್ಪ ಹೆಚ್ಚು ಮುನ್ನೆಚ್ಚರಿಕೆಯಿಂದ ಯೋಚಿಸಬೇಕಿದೆ. ಹೆಚ್ಚು ಜಾಗೃತರಾಗಬೇಕಿದೆ. ಸತ್ಯ, ನಿಷ್ಠೆ ಹಾಗೂ ಪಾರದರ್ಶಕತೆಯ ಮೂಲಕ ದೇಶವನ್ನು ಮುನ್ನಡೆಸುವ ನಾಯಕರನ್ನು ಗೌರವಿಸಬೇಕಿದೆ. ರಾಹುಲ್ ಗಾಂಧಿ ಅವರು ಸಾರ್ವಜನಿಕರು ಹಾಗೂ ಮಾಧ್ಯಮಗಳೊಂದಿಗೆ ಮುಕ್ತವಾಗಿ ಸಂವಾದ ನಡೆಸುತ್ತಾರೆ. ಅದೇ ರೀತಿ, ನಾವು ಸಹ ಸಂವಾದಕ್ಕೆ ಮುಂದಾಗಬೇಕಿದೆ. ಪ್ರಾಮಾಣಿಕ ಸಂವಾದವನ್ನು ನಾನು ಯಾವಾಗಲೂ ಸ್ವಾಗತಿಸುತ್ತೇನೆ ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…