ಬೆಂಗಳೂರು: ಸಿದ್ದರಾಮಯ್ಯ ಹೆಸರಲ್ಲಿ ರಾಮ ಇದ್ದಾನೆ. ನನ್ನ ಹೆಸರಲ್ಲಿ ಶಿವ ಇದ್ದಾನೆ. ನಮಗೆ ಯಾರೂ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ದಿನ ರಜೆ ನೀಡುವ ಬಗ್ಗೆ ಹೇಳಿಕೊಡಬೇಕಿಲ್ಲ. ಯಾರು ಒತ್ತಡ ಹಾಕೋದು ಬೇಕಾಗಿಲ್ಲ. ನಮ್ಮ ಕರ್ತವ್ಯ ನಾವು ಮಾಡ್ತೀವಿ. ರಾಜಕಾರಣದಲ್ಲಿ ಧರ್ಮ ಇರಬೇಕು. ಧರ್ಮದಲ್ಲಿ ರಾಜಕಾರಣ ಇರಬಾರದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಅಯೋಧ್ಯೆಯಲ್ಲಿ ಜನವರಿ 22 ರಂದು ರಾಮನ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ರಾಜ್ಯ ಸರ್ಕಾರ ಅಂದು ರಜೆ ಘೋಷಿಸಬೇಕು ಎಂದು ಬಜೆಪಿ, ಕಾಂಗ್ರೆಸ್ ಸರ್ಕಾರಕ್ಕೆ ಒತ್ತಡ ಹಾಕಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಕೆ ನಾವು ನಮ್ಮ ಭಕ್ತಿ, ನಮ್ಮ ಗೌರವ, ನಮ್ಮ ಧರ್ಮ ಪ್ರಚಾರಕ್ಕೆ ನಾವು ಏನು ಮಾಡಲ್ಲ. ನಮ್ಮ ಭಾವನೆ ಇದೆಯಲ್ಲ. ನಮ್ಮ ಮಂತ್ರಿಗಳೇ ಎಲ್ಲಾ ದೇವಸ್ಥಾನಗಳಲ್ಲಿ ಮಾಡಬೇಕಾದ ಆಚರಣೆಗಳಿಗೆ ಆದೇಶ ಹೊರಡಿಸಿದ್ದಾರೆ ಎಂದು ಹೇಳಿದ್ದಾರೆ.
ಪೂಜೆ, ಪುನಸ್ಕಾರ ಏನು ಮಾಡಬೇಕೋ ಆ ಕೆಲಸ ಮಾಡ್ತಿದ್ದೇವೆ. ನಮ್ಮ ಪ್ರಾರ್ಥನೆಗೆ ಫಲ ನಮಗೆ ದೊರೆಯುತ್ತದೆ ಅನ್ನೋ ನಂಬಿಕೆಯಿದೆ. ಹೀಗಾಗಿ ಎಲ್ಲರೂ ಪ್ರಾರ್ಥನೆ ಮಾಡಿಕೊಳ್ಳಿ ಅಂತ ಹೇಳಿರುವುದಾಗಿ ಸರ್ಕಾರದಿಂದ ರಜೆ ಕೊಡಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಪರೋಕ್ಷವಾಗಿ ಹೇಳಿಕೆ ನೀಡಿದ್ದಾರೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…