ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು, ತಮ್ಮ ಆಪ್ತ ಕಾರ್ಯದರ್ಶಿ ಮತ್ತು ವಿಶೇಷಾಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ ಮತ್ತು ವಿಶೇಷ ಕರ್ತವ್ಯ ಅಧಿಕಾರಿ ರಮೇಶ್ ಪಿ.ಕೋನಾರೆಡ್ಡಿ ಅವರನ್ನು ವರ್ಗಾವಣೆ ಮಾಡಲಾಗಿದೆ.
ಮೂಲಗಳ ಪ್ರಕಾರ ಡಾ.ವೆಂಕಟೇಶಯ್ಯ ಅವರನ್ನು ಕೃಷಿ ಮಾರಾಟ ಇಲಾಖೆಯ ನಿರ್ದೇಶಕರಾಗಿ ಮತ್ತು ರಮೇಶ್ ಪಿ.ಕೋನಾರೆಡ್ಡಿ ಅವರನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇಲಾಖೆಯ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಅಂತೆಯೇ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇಲಾಖೆಯ ನಿರ್ದೇಶಕರಾಗಿದ್ದ ವಿಜಯ್ ಬಿ.ಪಿ ಅವರಿಗೆ ಸ್ಥಳ ನಿಯುಕ್ತಿಗಾಗಿ ಸಂಬಂಧ ಇಲಾಖೆಗೆ ಕಾರ್ಯವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಇನ್ನು ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಮಾಂಡ್ ನಿರ್ದೇಶನದ ಮೇರೆಗೆ ಇಂದು ತಮ್ಮ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದರು. ಇಂದು ಮಧ್ಯಾಹ್ನ ಲೋಕಭವನಕ್ಕೆ ಆಗಮಿಸಿದ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭು ಶಂಕರ್ ಅವರಿಗೆ ಸಲ್ಲಿಸಿದರು. ಈ ಮೂಲಕ ಕಳೆದ ಮೂರು ವರ್ಷಗಳ ಅವರ ಆಡಳಿತ ಅಂತ್ಯಗೊಂಡಿತು.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…